March 22, 2026
Sunday, March 22, 2026
spot_img

ಅಯೋಧ್ಯೆ ಶ್ರೀ ರಾಮನ ದರುಶನ ಪಡೆದ ಮಾಜಿ ಕ್ರಿಕೆಟಿಗ ಜಹೀರ್ ಖಾನ್ ದಂಪತಿ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಕ್ರಿಕೆಟ್ ಆಟಗಾರ ಜಹೀರ್ ಖಾನ್ ಹಾಗೂ ಅವರ ಪತ್ನಿ ಸಾಗರಿಕಾ ಘಾಟ್ಗೆ ಅವರು ಅಯೋಧ್ಯೆಯ ರಾಮ ಮಂದಿರಕ್ಕೆ ಭೇಟಿ ನೀಡಿದ್ದು, ಶ್ರೀ ರಾಮನ ದರುಶನ ಪಡೆದಿದ್ದಾರೆ .

ಈ ಕುರಿತು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಗನ ಜೊತೆ ಜಹೀರ್ ಖಾನ್, ಪತ್ನಿ ಸಾಗರಿಕಾ ಅವರು ರಾಮನ ಆಶೀರ್ವಾದ ಪಡೆದುಕೊಂಡಿದ್ದಾರೆ.

ದೇವಾಲಯದ ಆವರಣದಲ್ಲಿ ಮಗನ ಜೊತೆ ಸ್ವಲ್ಪ ಹೊತ್ತು ಕಾಲ ಕಳೆದರು.

ಜಹೀರ್ ಖಾನ್ ಹಾಗೂ ಸಾಗರಿಕಾ ಘಾಟ್ಗೆ ಅವರು 2017ರ ನವೆಂಬರ್ 23 ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !