ಹೊಸದಿಗಂತ ಡಿಜಿಟಲ್ ಡೆಸ್ಕ್ :
ಅಬಕಾರಿ ನೀತಿ ಪ್ರಕರಣಕದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿಯ ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಸಿಬಿಐ ಕಸ್ಟಡಿಯಲ್ಲಿ ಇಡಲಾಗಿತ್ತು. ಇಂದು ಕೋರ್ಟ್ ಗೆ ಹಾಜರುಪಡಿಸುವ ಮುನ್ನ ಅವರಿಗೆ ಮಾರ್ಚ್ 20ರ ವರೆಗೆ ಮತ್ತೆ ನ್ಯಾಯಾಂಗ ಬಂಧನದಲ್ಲಿ ಇರಿಸಲು ರೋಸ್ ಅವೆನ್ಯೂ ಕೋರ್ಟ್ ಆದೇಶ ನೀಡಿದೆ.
ಸಿಸೋಡಿಯಾ ವಿಚಾರಣೆಗೆ ಸಹಕಾರ ನೀಡುತ್ತಿಲ್ಲ. ಹೀಗಾಗಿ ಇನ್ನೂ 14 ದಿನಗಳ ಕಾಲ ಅವರನ್ನು ಕಸ್ಟಡಿಗೆ ನೀಡಬೇಕು ಎಂದು ಸಿಬಿಐ ಪರ ವಕೀಲರು ವಾದ ಮಂಡಿಸಿದರು. ಆದರೆ 14 ದಿನಗಳ ಕಾಲ ಕಸ್ಟಡಿ ವಿಸ್ತರಣೆ ಮಾಡಿ ದೆಹಲಿಯ ರೋಸ್ ಅವೆನ್ಯೂ ನ್ಯಾಯಾಲಯ ಆದೇಶಿಸಿದೆ.