ಹೊಸದಿಗಂತ ಡಿಜಿಟಲ್ ಡೆಸ್ಕ್:
ದೆಹಲಿ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಇತ್ತೀಚೆಗೆ ರಾಜೀನಾಮೆ ನೀಡಿದ್ದ ಅರವಿಂದರ್ ಸಿಂಗ್ ಲವ್ಲಿ ಇಂದು ಅಧಿಕೃತವಾಗಿ ಬಿಜೆಪಿ (BJP) ಸೇರ್ಪಡೆಯಾಗಿದ್ದಾರೆ.
ಅವರ ಜೊತೆ ಮಾಜಿ ಶಾಸಕರಾದ ರಾಜ್ ಕುಮಾರ್ ಚೌಹಾಣ್, ನಸೀಬ್ ಸಿಂಗ್, ನೀರಜ್ ಬಸೋಯಾ ಮತ್ತು ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅಮಿತ್ ಮಲಿಕ್ ಕೂಡ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ.
ಆಮ್ ಆದ್ಮಿ (APP) ಪಕ್ಷದೊಂದಿಗೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿರುವುದನ್ನು ಖಂಡಿಸಿ ಅವರು ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.