ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋದ ದೆಹಲಿ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌: 

ಹೊಸ ಅಬಕಾರಿ ನೀತಿ ಪ್ರಕರಣದಲ್ಲಿನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ED) ಮತ್ತು ಕೇಂದ್ರೀಯ ತನಿಖಾ ದಳ (CBI) ದಾಖಲಿಸಿರುವ ಪ್ರಕರಣದಲ್ಲಿ ಜಾಮೀನು (Bail) ನೀಡುವಂತೆ ಮಾಜಿ ಡಿಸಿಎಂ ಮನೀಶ್ ಸಿಸೋಡಿಯಾ ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಪಿಎಂಎಲ್‌ಎ ವಿಶೇಷ ನ್ಯಾಯಾಲಯ ರೋಸ್ ಅವೆನ್ಯೂ ಕೋರ್ಟ್ ಎರಡನೇ ಸಾಮಾನ್ಯ ಜಾಮೀನು ಅರ್ಜಿ ವಜಾ ಮಾಡಿದ ಹಿನ್ನೆಲೆ ಮೇಲ್ಮನವಿ ಸಲ್ಲಿಸಿರುವ ಅವರು ತುರ್ತು ವಿಚಾರಣೆ ನಡೆಸುವಂತೆ ಇಂದು ಮನವಿ ಮಾಡಿದರು. ಆದರೆ ತುರ್ತು ವಿಚಾರಣೆಗೆ ನಿರಾಕರಿಸಿದ ಹೈಕೋರ್ಟ್ ಶುಕ್ರವಾರ ವಿಚಾರಣೆ ನಡೆಸುವುದಾಗಿ ತಿಳಿಸಿದೆ.

ಕಳೆದ ವರ್ಷ ಫೆಬ್ರವರಿ 26 ಮತ್ತು ಮಾರ್ಚ್ 9 ರಂದು ಮನೀಷ್ ಸಿಸೋಡಿಯಾ ಅವರನ್ನು ಕ್ರಮವಾಗಿ ಸಿಬಿಐ ಮತ್ತು ಇಡಿ ಮೊದಲ ಬಾರಿಗೆ ಬಂಧಿಸಿತ್ತು. ಸಿಬಿಐ ದಾಖಲಿಸಿದ ಎಫ್‌ಐಆರ್‌ನಲ್ಲಿ, ಸಿಸೋಡಿಯಾ ಮತ್ತು ಇತರರು 2021-22ರ ಅಬಕಾರಿ ನೀತಿಗೆ ಸಂಬಂಧಿಸಿದಂತೆ ‘ಶಿಫಾರಸು’ ಮತ್ತು ‘ನಿರ್ಧಾರಗಳನ್ನು ತೆಗೆದುಕೊಳ್ಳುವಲ್ಲಿ’ ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ.

- Advertisement - Ply
Nova

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!