Sunday, June 4, 2023

Latest Posts

ರಸ್ತೆ ಅಪಘಾತದಲ್ಲಿ ಗುಜರಾತ್‌ನ ಮಾಜಿ ಕೃಷಿ ಸಚಿವ ನಿಧನ

ಹೊಸದಿಗಂತ ಡಿಜಿಟಲ್ ಡೆಸ್ಕ್:‌ 

ಗುಜರಾತ್‌ನ ಅಮ್ರೇಲಿ ಜಿಲ್ಲೆಯ ಸಾವರ್ಕುಂಡ್ಲಾ ಪಟ್ಟಣದ ಬಳಿ ಕಾರು ಬುಲ್ಡೋಜರ್‌ಗೆ ಡಿಕ್ಕಿ ಹೊಡೆದು ಗುಜರಾತ್‌ನ ಮಾಜಿ ಕೃಷಿ ಸಚಿವ ವಲ್ಲಭಭಾಯಿ ವಘಾಸಿಯಾ ಅವರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಶುಕ್ರವಾರ ಸ್ಪಷ್ಟಪಡಿಸಿದ್ದಾರೆ. ಸಾವರ್ಕುಂಡ್ಲಾ ವಿಧಾನಸಭಾ ಕ್ಷೇತ್ರದ ಬಿಜೆಪಿ ಮಾಜಿ ಶಾಸಕ ವಘಾಸಿಯಾ (69), ವಿಜಯ್ ರೂಪಾನಿ ಸರ್ಕಾರದ ಮೊದಲ ಅವಧಿಯಲ್ಲಿ ಕೃಷಿ ಮತ್ತು ನಗರ ವಸತಿ ಸಚಿವರಾಗಿ ಸೇವೆ ಸಲ್ಲಿಸಿದ್ದರು.

ಅವರು ಗ್ರಾಮದಿಂದ ಸಾವರಕುಂದಕ್ಕೆ ಹಿಂತಿರುಗುತ್ತಿದ್ದಾಗ ವಂದ ಗ್ರಾಮದ ಬಳಿ ರಾಜ್ಯ ಹೆದ್ದಾರಿಯಲ್ಲಿ ರಾತ್ರಿ 8.30 ರ ವೇಳೆ ಅಪಘಾತ ಸಂಭವಿಸಿದೆ. ಅವರೊಂದಿಗೆ ವಾಹನದಲ್ಲಿದ್ದ ವ್ಯಕ್ತಿಯೊಬ್ಬರು ಗಾಯಗೊಂಡಿದ್ದಾರೆ. ಬುಲ್ಡೋಜರ್‌ಗೆ ಕಾರು ಡಿಕ್ಕಿ ಹೊಡೆದು ಮಾಜಿ ಸಚಿವರು ಗಾಯಗೊಂಡಿದ್ದರು. ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತದ ವಿಷಯ ತಿಳಿದ ಪಕ್ಷದ ಮುಖಂಡರು ಹಾಗೂ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಸ್ಪತ್ರೆಗೆ ಆಗಮಿಸಿದರು.

ವಘಾಸಿಯಾ 2012 ರ ವಿಧಾನಸಭಾ ಚುನಾವಣೆಯಲ್ಲಿ ಸಾವರಕುಂಡ್ಲಾ ಕ್ಷೇತ್ರದಿಂದ ಬಿಜೆಪಿ ಶಾಸಕರಾಗಿ ಗೆದ್ದರು. 2016 ರಲ್ಲಿ ಅವರು ವಿಜಯ್ ರೂಪಾನಿ ಸರ್ಕಾರದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!