ಅಕ್ರಮ ಆಸ್ತಿ ಪ್ರಕರಣ: ಹರಿಯಾಣ ಮಾಜಿ ಮುಖ್ಯಮಂತ್ರಿಗೆ 4 ವರ್ಷ ಜೈಲುಶಿಕ್ಷೆ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಅಕ್ರಮ ಆಸ್ತಿ (ಡಿಎ) ಪ್ರಕರಣದಲ್ಲಿ ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌತಾಲಾ ಅವರಿಗೆ ದೆಹಲಿ ನ್ಯಾಯಾಲಯನಾಲ್ಕು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಶುಕ್ರವಾರ ವಿಚಾರಣೆ ನಡೆಸಿದ ನ್ಯಾಯಾಲಯದ ವಿಶೇಷ ನ್ಯಾಯಾಧೀಶ ವಿಕಾಸ್ ಧುಲ್, 1993ರಿಂದ 2006ರವರೆಗೆ ಅಕ್ರಮ ಆಸ್ತಿ ಗಳಿಸಿದ ಪ್ರಕರಣದಲ್ಲಿ ಅಪರಾಧಿಗೆ 50 ಲಕ್ಷ ರೂಪಾಯಿ ದಂಡ ವಿಧಿಸಿದ್ದಲ್ಲದೆ 4 ವರ್ಷಗಳ ಜೈಲುಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.
ಅವರ ನಾಲ್ಕು ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ನ್ಯಾಯಾಧೀಶರು ಸೂಚಿಸಿದ್ದಾರೆ. ಕಳೆದ ವಾರ ಚೌತಾಲಾ ಅವರನ್ನು ನ್ಯಾಯಾಲಯವು ತಪ್ಪಿತಸ್ಥರೆಂದು ಘೋಷಿಸಿತ್ತು.
ಸಿಬಿಐ 2005 ರಲ್ಲಿ ಪ್ರಕರಣವನ್ನು ದಾಖಲಿಸಿತ್ತು. 1993 ಮತ್ತು 2006ರ ನಡುವೆ ಅವರ ಕಾನೂನುಬದ್ಧ ಆದಾಯಕ್ಕೆ ಅನುಗುಣವಾಗಿ ಆಸ್ತಿಯನ್ನು ಗಳಿಸಿದ ಆರೋಪದ ಮೇಲೆ ಮಾರ್ಚ್ 26, 2010 ರಂದು ಚಾರ್ಜ್ ಶೀಟ್ ಸಲ್ಲಿಸಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!