ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತೀಯ ರಾಷ್ಟ್ರೀಯ ಲೋಕದಳ ಮುಖ್ಯಸ್ಥ ಮತ್ತು ಹರಿಯಾಣದ ಮಾಜಿ ಮುಖ್ಯಮಂತ್ರಿ ಓಂ ಪ್ರಕಾಶ್ ಚೌಟಾಲ (89) ಅವರು ಇಂದು ಇಹಲೋಕ ತ್ಯಜಿಸಿದ್ದಾರೆ.
ಓಂ ಪ್ರಕಾಶ್ ಚೌಟಾಲ ಅವರು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ. ಈ ವರ್ಷದ ಅಕ್ಟೋಬರ್ 5 ರಂದು ನಡೆದ ಹರಿಯಾಣ ವಿಧಾನಸಭಾ ಚುನಾವಣೆಯ ಮತದಾನದ ವೇಳೆ ಓಂ ಪ್ರಕಾಶ್ ಚೌತಾಲಾ ಕೊನೆಯ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದರು.
ಇನ್ನು ಭಾರತದ ಮಾಜಿ ಉಪ ಪ್ರಧಾನಿ ಚೌಧರಿ ದೇವಿ ಲಾಲ್ ಅವರ ಪುತ್ರ ಓಂ ಪ್ರಕಾಶ್ ಚೌಟಾಲಾ ಅವರು ಹರಿಯಾಣದ ಏಳನೇ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದರು. 27 ಮೇ 2022 ರಂದು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಶನ್ (ಸಿಬಿಐ) ನ್ಯಾಯಾಲಯವು 16 ವರ್ಷಗಳಷ್ಟು ಹಳೆಯದಾದ ಅಕ್ರಮ ಆಸ್ತಿ ಪ್ರಕರಣದಲ್ಲಿ ಚೌಟಾಲಾ ಅವರಿಗೆ ನಾಲ್ಕು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತ್ತು. ಅವರನ್ನು 2020 ರಲ್ಲಿ ಬಿಡುಗಡೆ ಮಾಡಲಾಗಿತ್ತು.