ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಟೀಮ್ ಇಂಡಿಯಾದ ಮಾಜಿ ಆಟಗಾರ,ಮಾಜಿ ಹೆಡ್ ಕೋಚ್ ಕನ್ನಡಿಗ ರಾಹುಲ್ ದ್ರಾವಿಡ್ ಅವರ ಕಾರು ಗೂಡ್ಸ್ ಗಾಡಿಗೆ ಟಚ್ ಆಗಿ ಅಪಘಾತ ಸಂಭವಿಸಿದೆ. ಆದ್ರೆ ಈ ಅಪಘಾತದಲ್ಲಿ ಯಾವುದೇ ಗಾಯವಾಗಲಿ, ಪ್ರಾಣಾಪಾಯದಂತಹ ಘಟನೆಗಳು ಸಂಭವಿಸಿಲ್ಲ.
ಬೆಂಗಳೂರು ನಗರದ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ಇಂದು ಸಂಜೆ ಸುಮಾರಿಗೆ ಈ ಘಟನೆ ನಡೆದಿದೆ. ಕಾರು ಟಚ್ ಆದ ಬಳಿಕ ರಾಹುಲ್ ದ್ರಾವಿಡ್ ಕಾರಿನಿಂದ ಕೆಳಗಿಳಿದು ಕಾರನ್ನು ಪರಿಶೀಲಿಸಿದ್ದಾರೆ. ಹೈಗ್ರೌಂಡ್ಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಸದ್ಯ ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ.