ಅಮೆರಿಕದ ಮಾಜಿ ಭಾರತೀಯ ರಾಯಭಾರಿ ತರಣ್‌ಜಿತ್ ಸಿಂಗ್ ಸಂಧು ಬಿಜೆಪಿಗೆ ಸೇರ್ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಲೋಕಸಭೆ ಚುನಾವಣೆ ಘೋಷಣೆ ಬೆನ್ನಲ್ಲೇ ಅನೇಕ ಪ್ರಮುಖ ನಾಯಕರು ಬಿಜೆಪಿಯತ್ತ ಒಲವು ತೋರುತ್ತಿದ್ದು, ಇದೀಗ ಅಮೆರಿಕದಲ್ಲಿನ ಮಾಜಿ ಭಾರತೀಯ ರಾಯಭಾರಿ ತರಣ್‌ಜಿತ್ ಸಿಂಗ್ ಸಂಧು ಅವರು ಇಂದು (ಮಂಗಳವಾರ) ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕರ ಸಮ್ಮುಖದಲ್ಲಿ ಸಂಧು ಅವರು ಬಿಜೆಪಿಗೆ ಸೇರಿದ್ದಾರೆ.

ತರಣ್‌ಜಿತ್ ಅವರು ಅಮೆರಿಕದಲ್ಲಿನ ಭಾರತದ 28ನೇ ರಾಯಭಾರಿಯಾಗಿ ಸೇವೆ ಸಲ್ಲಿಸಿದ್ದರು.ಜತೆಗೆ ಶ್ರೀಲಂಕಾದಲ್ಲಿನ ಭಾರತದ ಹೈಕಮಿಷನರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.

 

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!