ಹೊಸದಿಗಂತ ಡಿಜಿಟಲ್ ಡೆಸ್ಕ್:
ಭಾರತದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಮನೆಯಲ್ಲಿ 70,000 ರೂ. ನಗದು ಮತ್ತು ಚಿನ್ನಾಭರಣ ನಾಪತ್ತೆಯಾಗಿದೆ ಎಂದು ಯುವರಾಜ್ ತಾಯಿ ಆರೋಪಿಸಿದ್ದಾರೆ.
ಯುವರಾಜ್ ಸಿಂಗ್ ಅವರ ತಾಯಿ ಶುಕ್ರವಾರ ಪಂಚಕುಲದ ಮಾನಸಾ ದೇವಿ ಕಾಂಪ್ಲೆಕ್ಸ್‌ನಲ್ಲಿರುವ ತಮ್ಮ ಮನೆಯಲ್ಲಿ ತಮ್ಮ ಮನೆಗೆಲಸದವರು ಹಣ ಮತ್ತು ಆಭರಣಗಳನ್ನು ಕದ್ದಿದ್ದಾರೆ ಎಂದು ದೂರಿದ್ದಾರೆ.
ಮನೆಯಲ್ಲಿದ್ದ 70 ಸಾವಿರ ನಗದು ಹಾಗೂ ಚಿನ್ನಾಭರಣ ನಾಪತ್ತೆಯಾಗಿದೆ ಎಂದು ತಾಯಿ ಶಬ್ನಮ್ ಸಿಂಗ್ ದೂರಿನಲ್ಲಿ ತಿಳಿಸಿದ್ದಾರೆ. ಅವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಇಬ್ಬರು ಸಿಬ್ಬಂದಿಯೇ ಈ ದರೋಡೆ ನಡೆಸಿರಬಹುದು ಎಂದು ಶಂಕಿಸಲಾಗಿದೆ.