ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿಗೆ ಅನಾರೋಗ್ಯ: ಕೃತಕ ಆಮ್ಲಜನಕ ಅಳವಡಿಕೆ!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಐಪಿಎಲ್ ಮಾಜಿ ಅಧ್ಯಕ್ಷ ಲಲಿತ್ ಮೋದಿ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದು, ಖಾಸಗಿ ಆಸ್ವತ್ರೆಗೆ ದಾಖಲಿಸಿ ಕೃತಕ ಆಮ್ಲಜನಕ ವ್ಯವಸ್ಥೆ ಅಳವಡಿಸಲಾಗಿದೆ .
ಮೂಲಗಳ ಪ್ರಕಾರ ಲಲಿತ್ ಮೋದಿ ಅವರು ಕೊರೋನಾ ಸೋಂಕು ಮತ್ತು ನ್ಯುಮೋನಿಯಾಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಬಾಹ್ಯ ಆಮ್ಲಜನಕ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹೇಳಲಾಗಿದೆ.
ಈ ಬಗ್ಗೆ ಲಲಿತ್ ಮೋದಿ ಇನ್ಸ್ಟಾಗ್ರಾಮ್ ನಲ್ಲಿ ಮಾಹಿತಿ ನೀಡಿದ್ದು, ಎರಡು ವಾರಗಳಲ್ಲಿ ಎರಡು ಬಾರಿ ಕೋವಿಡ್ ಸೋಂಕಿಗೆ ಒಳಗಾಗಿದ್ದು, ‘ಆಳವಾದ ನ್ಯುಮೋನಿಯಾ’ ಹೊಂದಿದ್ದೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಿದ್ದಾರೆ. ಅಂತೆಯೇ ಅಂತಿಮವಾಗಿ ಇಬ್ಬರು ವೈದ್ಯರು ಮತ್ತು ಸೂಪರ್ಸ್ಟಾರ್ ಸೂಪರ್-ದಕ್ಷ ಮಗನೊಂದಿಗೆ ಏರ್ ಆಂಬ್ಯುಲೆನ್ಸ್ ಮೂಲಕ ಬಂದಿಳಿದೆ.ಅವರು ಲಂಡನ್ನಲ್ಲಿ ನನಗಾಗಿ ತುಂಬಾ ಶ್ರಮಿಸಿದ್ದಾರೆ. ಹಾರಾಟ ಸುಗಮವಾಗಿತ್ತು. ದುರದೃಷ್ಟವಶಾತ್, ಇನ್ನೂ 24/7 ಬಾಹ್ಯ ಆಮ್ಲಜನಕ ವ್ಯವಸ್ಥೆಯಲ್ಲಿರಬೇಕು ಎಂದು ಪೋಸ್ಟ್ ಮಾಡಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!