ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಐಪಿಎಸ್ ಅಧಿಕಾರಿ ಹಾಗೂ ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷರಾಗಿದ್ದ ಭಾಸ್ಕರ್ ರಾವ್ ನಾಳೆ ಬೆಳಗ್ಗೆ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದೆ.
ಕಂದಾಯ ಸಚಿವ ಆರ್ ಅಶೋಕ್ ಅವರನ್ನುಭಾಸ್ಕರ್ ರಾವ್ ಅವರು ಇಂದು ಭೇಟಿ ಮಾಡಿದ್ದಾರೆ. ಸುಮಾರು 15 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ. ಇದರ ಜೊತೆಗೆ ಬಿಜೆಪಿ ರಾಜ್ಯ ಕಚೇರಿಗೆ ಕೂಡ ಭೇಟಿ ನೀಡಿ ಅಲ್ಲಿ ಬಿಜೆಪಿ ನಾಯಕರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದರು.
ಆಮ್ ಆದ್ಮಿ ಪಕ್ಷದಲ್ಲಿ ಭಾಸ್ಕರ್ ರಾವ್ ಸಕ್ರಿಯರಾಗಿದ್ದು, ಇದೀಗ ಬಿಜೆಪಿಯತ್ತ ಮುಖಮಾಡಿದ್ದಾರೆ ಎನ್ನಲಾಗುತ್ತಿದೆ.