ಹೊಸದಿಗಂತ ಡಿಜಿಟಲ್ ಡೆಸ್ಕ್:
ಇಸ್ರೋ (ISRO) ಮಾಜಿ ಅಧ್ಯಕ್ಷ, ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ (Krishnaswamy Kasturirangan) ಅವರಿಗೆ ಹೃದಯಾಘಾತವಾಗಿದೆ.
ಶ್ರೀಲಂಕಾದ ಕೊಲಂಬೋಗೆ (Colombo SriLanka) ತೆರಳಿದ್ದ ವೇಳೆ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತವಾಗಿದೆ. ತಕ್ಷಣವೇ ಶ್ರೀಲಂಕಾದಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮೂಲಕ ಕರೆತರಲಾಗಿದೆ.
ನಾರಾಯಣ ಹೃದಯಾಲಯಕ್ಕೆ ದಾಖಲು ಮಾಡಿ, ಡಾ. ದೇವಿ ಶೆಟ್ಟಿ ನೇತೃತ್ವದಲ್ಲಿ ಕಸ್ತೂರಿ ರಂಗನ್ ಅವರಿಗೆ ಚಿಕಿತ್ಸೆ ನೀಡಲು ಸಿದ್ಧತೆ ನಡೆಸಲಾಗಿದೆ. ಪ್ರಸ್ತುತ ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ.