ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………..
ಹೊಸದಿಗಂತ ಆನ್ ಲೈನ್ ಡೆಸ್ಕ್:
ಡಾ. ಶಿವಮೂರ್ತಿ ಮುರುಘಾ ಶರಣರು ಮುರುಘಾ ಮಠದ ವತಿಯಿಂದ ನೀಡಲಾಗುವ ಬಸವಶ್ರೀ ಪ್ರಶಸ್ತಿಯನ್ನು ಘೋಷಣೆ ಮಾಡಿದ್ದಾರೆ.
5 ಲಕ್ಷ ರೂಪಾಯಿ ನಗದು ಒಳಗೊಂಡ ಪ್ರಶಸ್ತಿ ಇದಾಗಿದ್ದು, ಲಾಕ್ಡೌನ್ ಬಳಿಕ ಪ್ರಶಸ್ತಿ ಪುರಸ್ಕಾರ ಸಮಾರಂಭ ನಡೆಯಲಿದೆ.
2019 ನೇ ಸಾಲಿನ ಪ್ರಶಸ್ತಿಗೆ ಸರೋದ್ ವಾದಕ ಪಂಡಿತ್ ರಾಜೀವ್ ತಾರಾನಾಥ್, 2020 ನೇ ಸಾಲಿನ ಪ್ರಶಸ್ತಿಗೆ ಇಸ್ರೋ ಮಾಜಿ ಅಧ್ಯಕ್ಷ, ವಿಜ್ಞಾನಿ ಕಸ್ತೂರಿ ರಂಗನ್ ಅವರನ್ನು ಆಯ್ಕೆ ಮಾಡಲಾಗಿದೆ. ಲಾಕ್ ಡೌನ್ ಬಳಿಕ 5 ಲಕ್ಷ ರೂಪಾಯಿ ನಗದು, ಪ್ರಶಸ್ತಿ ಫಲಕ ನೀಡಿ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಹೇಳಲಾಗಿದೆ.