Wednesday, September 27, 2023

Latest Posts

‘ಚಂದ್ರಯಾನ-3’ ಯಶಸ್ಸಿಗೆ ಕಾರಣ ತೆರೆದಿಟ್ಟ ಇಸ್ರೋ ಮಾಜಿ ವಿಜ್ಞಾನಿ ನಂಬಿ ನಾರಾಯಣನ್

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಚಂದ್ರಯಾನ-2ರ ವೈಫಲ್ಯದಿಂದ ಕಲಿತ ಪಾಠಗಳು ಚಂದ್ರಯಾನ-3 ಯಶಸ್ಸಿಗೆ ಕಾರಣವಾಗಿವೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೋ) ಮಾಜಿ ಬಾಹ್ಯಾಕಾಶ ವಿಜ್ಞಾನಿ ನಂಬಿ ನಾರಾಯಣನ್ ಹೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐ ಜೊತೆ ಮಾತನಾಡಿದ ನಾರಾಯಣನ್, ಚಂದ್ರಯಾನ-3 ಯಶಸ್ಸಿಗೆ ಕಾರಣಕರ್ತರಾದ ವಿಜ್ಞಾನಿಗಳನ್ನು ಅಭಿನಂದಿಸಿದರು. ಚಂದ್ರಯಾನ -2ರ ವೈಫಲ್ಯಗಳಿಂದ ಕಲಿತ ಪಾಠದಿಂದ ಇಂದು ಚಂದ್ರಯಾನ-3 ಯಶಸ್ಸು ಸಾಧಿಸಲು ಸಾಧ್ಯವಾಗಿದೆ ಎಂದು ಹೇಳಿದರು.

ಅನೇಕ ಸವಾಲುಗಳ ನಡುವೆ ಇಸ್ರೋ ವಿಜ್ಞಾನಿಗಳು ಈ ಸಾಧನೆಯನ್ನು ಮಾಡಿದ್ದಾರೆ. ಅವರ ಶ್ರಮಕ್ಕೆ ಸಿಕ್ಕ ಪ್ರತಿಫಲವಿದು, ಅವರು ಅಂದುಕೊಂಡಿದ್ದನ್ನು ಸಾಧಿಸಿ ತೋರಿಸಿದ್ದಾರೆ. ಇದರಿಂದ ವಿಶ್ವವೇ ಹುಬ್ಬೇರಿಸುವಂತಾಗಿದೆ. ಭಾರತದ ಪಾಲಿಗೆ ಸುದಿನ ಎಂದರು.

ನಿನ್ನೆ ಸಂಜೆ ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಮಿಷನ್‌ ಚಂದ್ರನ ಅಂಗಳಕ್ಕೆ ಕಾಲಿಡುವಲ್ಲಿ ಯಶಸ್ವಿಯಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!