ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
…………………………………………………………………………………….
ಹೊಸದಿಗಂತ ಆನ್ ಲೈನ್ ಡೆಸ್ಕ್:
ಜಮ್ಮು ಕಾಶ್ಮೀರದ ಮಾಜಿ ಗವರ್ನರ್ ಜಗಮೋಹನ್ (94) ಅವರು ಇಂದು ನಿಧನರಾಗಿದ್ದಾರೆ.
ದೀರ್ಘಕಾಲಿಕ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ಬೆಳಗ್ಗೆ ಕೊನೆಯುಸಿರೆಳೆದಿದ್ದಾರೆ.
1927ರ ಸೆಪ್ಟೆಂಬರ್ 25ರಂದು ಜನಮೋಹನ್ ಜನಿಸಿದ್ದು, ವೃತ್ತಿ ಜೀವನದಲ್ಲಿ ಜಮ್ಮು ಕಾಶ್ಮೀರ ಹಾಗೂ ಗೋವಾದ ರಾಜ್ಯಪಾಲರಾಗಿ ಸೇವೆ ಸಲ್ಲಿಸಿದ್ದರು. ಬಳಿಕ ದೆಹಲಿಯ ಲೆಫ್ಟಿನೆಂಟ್ ಗವರ್ನರ್ ಆಗಿ ಕಾರ್ಯ ನಿರ್ವಹಿಸಿದ್ದರು.
ಇವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದು, ಜಗಮೋಹನ್ ಜೀ ಅವರ ನಿಧನದಿಂದ ರಾಷ್ಟ್ರಕ್ಕೆ ದೊಡ್ಡ ನಷ್ಟವಾಗಿದೆ. ಜಗಮೋಹನ್ ಅವರು ಖ್ಯಾತ ನಿರ್ವಾಹಕರು ಹಾಗೂ ವಿದ್ವಾಂಸರಾಗಿದ್ದರು. ಸದಾಕಾಲ ಭಾರತದ ಸುಧಾರಣೆಗೆ ಶ್ರಮಿಸಿದವರು. ಅವರ ಅಧಿಕಾರಾವಧಿಯಲ್ಲಿ ರಚಿಸಿದ ನವೀನ ರೀತಿಯ ನೀತಿಗಳು ಮೆಚ್ಚುಗೆಗೆ ಪಾತ್ರವಾಗಿತ್ತು. ಅವರ ಕುಟುಂಬಕ್ಕೆ ಸಂತಾಪ ಸೂಚಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.