ಜೆಡಿಎಸ್‌ ಮಾಜಿ ಶಾಸಕ ನಾಗನಗೌಡ ಕಂದಕೂರ್ ವಿಧಿವಶ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಎದೆನೋವು ಕಾಣಿಸಿಕೊಂಡು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಜೆಡಿಎಸ್ ಮಾಜಿ ಸಂಸದ ನಾಗನಗೌಡ ಕಂದಕೂರ್  (79) ವಿಧಿವಶರಾಗಿದ್ದಾರೆ.

ದಿವಂಗತ ನಾಗನಗೌಡ ಕಂದಕೂರ್  ಅವರು 2018 ರಲ್ಲಿ ಯಾದಗಿರಿ ಜಿಲ್ಲೆ ಗುರುಮಠಕಲ್‌ ಶಾಸಕರಾಗಿದ್ದರು. ನಾಗನಗೌಡ ಕಂದಕೂರ್ ಜೆಡಿಎಸ್‌ನಿಂದ ಮೊದಲ ಶಾಸಕರಾಗಿ ಆಯ್ಕೆಯಾದರು. ನಾಗನಗೌಡ ಕಂದಕೂರ್  ಗುರುಮಠಕಲ್ ನ ಜೆಡಿಎಸ್ ಹಾಲಿ ಶಾಸಕ ಶರಣಗೌಡ ಕಂದಕೂರ್ ಅವರ ತಂದೆ.

ಇಂದು ಬೆಳಗ್ಗೆ ಎದೆನೋವು ಕಾಣಿಸಿಕೊಂಡಿದ್ದರಿಂದ ನಾಗನಗೌಡ ಕಂದಕೂರ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಬೆಳಿಗ್ಗೆ 11 ಗಂಟೆಗೆ ಹೃದಯಾಘಾತದಿಂದ ನಿಧನರಾದರು. ಯಾದಗಿರಿ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಾಗನಗೌಡ ಕಂದಕೂರ್ ಅವರು ಕೊನೆಯುಸಿರೆಳೆದಿದ್ದು, ಸಂಬಂಧಿಕರು ಹಾಗೂ ಜೆಡಿಎಸ್ ಕಾರ್ಯಕರ್ತರು ಕಂಬನಿ ಮಿಡಿದಿದ್ದಾರೆ.

ಮಾಜಿ ಶಾಸಕ ನಾಗನಗೌಡ ಕಂದಕೂರ್ ಅವರ ಪಾರ್ಥಿವ ಶರೀರವನ್ನು ನಗರದ ಖಾಸಗಿ ಆಸ್ಪತ್ರೆಯಿಂದ ಸ್ವಗೃಹಕ್ಕೆ ತರಲಾಯಿತು. ಪಾರ್ಥಿವ ಶರೀರವನ್ನು ಆಂಬ್ಯುಲೆನ್ಸ್ ನಲ್ಲಿ ಅವರ ಮನೆಗೆ ಕೊಂಡೊಯ್ಯಲಾಯಿತು. ಆದರೆ ತಂದೆಯನ್ನು ಕಳೆದುಕೊಂಡ ಶಾಸಕ ಶರಣಗೌಡ ಕಂದಕೂರ್ ತಾಯಿಯನ್ನು ಅಪ್ಪಿಕೊಂಡು ಕಣ್ಣೀರಿಟ್ಟರು.

ಶಾಸಕ ಶರಣಗೌಡ ಕಂದಕೂರ್ ತಾಯಿಯ ಸ್ಥಿತಿ ಕಂಡು ಬೆಚ್ಚಿಬಿದ್ದಿದ್ದಾರೆ. ನಾಗನಗೌಡ ಕಂದಕೂರ್ ಅವರ ಪಾರ್ಥಿವ ಶರೀರ ಮನೆಗೆ ಆಗಮಿಸಿದಾಗ ಕುಟುಂಬಸ್ಥರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!