ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕದ ಮಾಜಿ ಮುಖ್ಯ ಕಾರ್ಯದರ್ಶಿ ಬಿ.ಕೆ. ಭಟ್ಟಾಚಾರ್ಯ(83) ಅವರು ಶನಿವಾರ ನಿಧನರಾಗಿದ್ದಾರೆ.
ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಶುಕ್ರವಾರ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ .
ಭಟ್ಟಾಚಾರ್ಯ ಅವರು ಡಿಸೆಂಬರ್ 30, 2000 ರಂದು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಯಾಗಿ ನಿವೃತ್ತರಾಗಿದ್ದರು. ನಂತರ ಅವರ ಪತ್ನಿ ಥೆರೆಸಾ ಅವರು ಅಧಿಕಾರ ವಹಿಸಿಕೊಂಡಿದ್ದರು.
ಮಾಜಿ ಅಧಿಕಾರಿಯ ನಿಧನಕ್ಕೆ ಐಎಎಸ್ ಅಧಿಕಾರಿಗಳ ಸಂಘ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಸಿಎಂ ಸಿದ್ದರಾಮಯ್ಯ ಕೂಡ ಸಂತಾಪ ವ್ಯಕ್ತಪಡಿಸಿದ್ದಾರೆ.