Thursday, March 23, 2023

Latest Posts

ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ತೀವ್ರ ಅನಾರೋಗ್ಯ: ಬೆಂಗಳೂರಿಗೆ ಏರ್ ಲಿಫ್ಟ್!

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌ 

ಹಿರಿಯ ಕಾಂಗ್ರೆಸ್ ನಾಯಕ ಮತ್ತು ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ ಅವರು ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಭಾನುವಾರ ವಿಮಾನದ ಮೂಲಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತರಲಾಗಿದೆ.

ನ್ಯುಮೋನಿಯಾನಿಂದ ಬಳಲುತ್ತಿರುವ ಉಮ್ಮನ್ ಚಾಂಡಿ ಅವರನ್ನು ಚಿಕಿತ್ಸೆಗಾಗಿ ಸಮೀಪದ ನೆಯ್ಯಟ್ಟಿಂಕರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಅವರ ಪತ್ನಿ, ಇಬ್ಬರು ಪುತ್ರಿಯರು ಮತ್ತು ಮಗ ಚಾಂಡಿ ಉಮ್ಮನ್ ಅವರು ಹಿರಿಯ ನಾಯಕರೊಂದಿಗೆ ಬೆಂಗಳೂರಿಗೆ ಆಗಮಿಸಿದ್ದಾರೆ. 79 ವರ್ಷದ ಚಾಂಡಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ಸ್ಥಳಾಂತರಿಸಲು ಕಾಂಗ್ರೆಸ್ ನಿರ್ಧರಿಸಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಅವರು ಶನಿವಾರ ಹೇಳಿದ್ದರು. ಇದಕ್ಕೂ ಮುನ್ನ ಅವರ ಹದಗೆಟ್ಟ ಆರೋಗ್ಯದ ಬಗ್ಗೆ ವಿವಿಧ ವಲಯಗಳಿಂದ ತೀವ್ರ ಕಳವಳ ವ್ಯಕ್ತವಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!