ಹೊಸದಿಗಂತ ಡಿಜಿಟಲ್ ಡೆಸ್ಕ್:
ಕೇರಳದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಹಿರಿಯ ಮುಖಂಡ ಉಮ್ಮನ್ ಚಾಂಡಿ ಮಂಗಳವಾರ ಮುಂಜಾನೆ ಬೆಂಗಳೂರಿನಲ್ಲಿ ವಿಧಿವಶರಾಗಿದ್ದಾರೆ. ಅವರಿಗೆ 79 ವರ್ಷ ವಯಸ್ಸಾಗಿತ್ತು.
ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಚಾಂಡಿ, ಕಳೆದ ವರ್ಷ ಅಕ್ಟೋಬರ್‌ನಲ್ಲಷ್ಟೇ ಬರ್ಲಿನ್ ನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಈ ನಡುವೆ ಆರೋಗ್ಯದಲ್ಲಿ ಮತ್ತೆ ಏರುಪೇರು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಮಂಗಳವಾರ ಇಂದು ಮುಂಜಾನೆ ಅವರು ಕೊನೆಯುಸಿರೆಳೆದಿದ್ದಾರೆ.
ಕೇರಳ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನವನ್ನು ಪುತ್ರ ಸ್ಪಷ್ಟಪಡಿಸಿದ್ದಾರೆ. ಚಾಂಡಿ ನಿಧನಕ್ಕೆ ಕೇರಳ ಕಾಂಗ್ರೆಸ್ ಅಧ್ಯಕ್ಷ ಸುಧಾಕರನ್ ಸಹಿತ ವಿವಿಧ ಗಣ್ಯರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
ಮಂಗಳವಾರ ಮುಂಜಾನೆ ವಿಧಿವಶರಾದ ಕೇರಳ ಮಾಜಿ ಮುಖ್ಯಮಂತ್ರಿ ಉಮ್ಮನ್ ಚಾಂಡಿ, ಕಳೆದ 50 ವರ್ಷಕ್ಕೂ ಹೆಚ್ಚು ಕಾಲ ಕೊಟ್ಟಾಯಂ ಜಿಲ್ಲೆಯ ಪುತ್ತುಪಲ್ಲಿ ಕ್ಷೇತ್ರವನ್ನು ಪ್ರತಿನಿಧಿಸಿದ್ದರು.