ʼಮುಸ್ಲಿಮರು ಭಾರತವನ್ನು ವಶಪಡಿಸಿಕೊಳ್ಳಲು ಯತ್ನಿಸುತ್ತಿದ್ದಾರೆʼ ಎಂದಿದ್ದಕ್ಕೆ ಮಾಜಿ ಶಾಸಕನ ಬಂಧಿಸಿದ ಕೇರಳ ಪೊಲೀಸರು

ಹೊಸದಿಗಂತ ಡಿಜಿಟಲ್‌ ಡೆಸ್ಕ್‌
ಮುಸ್ಲಿಂ ಸಮುದಾಯದ ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಮಾಜಿ ಶಾಸಕ ಹಾಗೂ ಕೇರಳ ಜನಪಕ್ಷಂ (ಜಾತ್ಯತೀತ) ನಾಯಕ ಪಿ.ಸಿ.ಜಾರ್ಜ್ ರನ್ನು ಪೊಲೀಸರು ಬಂಧಿಸಿದ್ದಾರೆ. ಕೊಟ್ಟಾಯಂ ಜಿಲ್ಲೆಯ ಎರಟ್ಟುಪೆಟ್ಟಾದಲ್ಲಿರುವ ಅವರ ಮನೆಯಿಂದ ಅವರನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ತಿರುವನಂತಪುರಂನ ಅನಂತಪುರಿಯಲ್ಲಿ ಶುಕ್ರವಾರ ನಡೆದ ಹಿಂದೂ ಮಹಾಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಿದ್ದ ಜಾರ್ಜ್‌, ಮುಸ್ಲಿಮರು ಹಿಂದೂ ರಾಷ್ಟ್ರ ಭಾರತವನ್ನು ವಶಪಡಿಸಿಕೊಳ್ಳುವ ಗುರಿಯತ್ತ ಸಾಗುತ್ತಿದ್ದಾರೆ. ಅದರ ಭಾಗವಾಗಿಯೇ ಮುಸ್ಲಿಮರು ತಮ್ಮ ಆಹಾರ ಮಳಿಗೆಗಳಲ್ಲಿ ಎಂಜಲು ಉಗುಳಿದ ಆಹಾರನ್ನು ನೀಡಲಾಗುತ್ತದೆ. ಆದ್ದರಿಂದ ಮುಸ್ಲಿಮರು ನಡೆಸುತ್ತಿರುವ ರೆಸ್ಟೋರೆಂಟ್‌ ಗಳಿಗೆ ತೆರಳದಂತೆ ಸ್ಥಳೀಯ ನಿವಾಸಿಗಳಿಗೆ ಕರೆನೀಡಿದ್ದರು. ಅಲ್ಲದೆ ಮುಸ್ಲಿಮ್‌ ವ್ಯಾಪಾರಿಗಳನ್ನು ಬಹಿಷ್ಕರಿಸುವಂತೆಯೂ ಅವರು ಕರೆನೀಡಿದ್ದರು.
ಮುಸ್ಲಿಮರು ದೇಶದ ನಿಯಂತ್ರಣವನ್ನು ವಶಪಡಿಸಿಕೊಳ್ಳುವ ಉದ್ದೇಶದಿಂದ ಮುಸ್ಲಿಮೇತರಲ್ಲಿ ಬಂಜೆತನವನ್ನು ಸೃಷ್ಟಿಸುವ ಹುನ್ನಾರಗಳನ್ನು ನಡೆಸುತ್ತಿದ್ದಾರೆ.
ಹಿಂದೂ ಮತ್ತು ಕ್ರಿಶ್ಚಿಯನ್ ಮಹಿಳೆಯರು ಹೆಚ್ಚಿನ ಮಕ್ಕಳನ್ನು ಹೆರಲು ಇಷ್ಟಪಡುವುದಿಲ್ಲ. ಆದರೆ ಮುಸ್ಲಿಂ ಮಹಿಳೆಯರು ತಮ್ಮ ಸಂತತಿಯ ವೃದ್ಧಿಗಾಗಿ ಅದನ್ನು ಅತ್ಯಂತ ಪ್ರಾಮಾಣಿಕವಾಗಿ ನಿರ್ವಹಿಸುತ್ತಿದ್ದಾರೆ. ಆದ್ದರಿಂದ ಪ್ರತಿಯೊಬ್ಬ ಹಿಂದೂ ಮತ್ತು ಕ್ರಿಶ್ಚಿಯನ್ನರು ಕನಿಷ್ಠ ನಾಲ್ಕು ಮಕ್ಕಳನ್ನು ಹೊಂದಬೇಕು ಎಂದು ಅವರು ಕರೆ ನೀಡಿದ್ದರು.
ಈ ಭಾಷಣದ ತುಣುಕುಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗುತ್ತಿದ್ದಂತೆ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದರು. ಜಾರ್ಜ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153-ಎ (ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಆಡಳಿತಾರೂಢ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಮತ್ತು ಪ್ರತಿಪಕ್ಷ ಕಾಂಗ್ರೆಸ್ ಗಳು ಜಾರ್ಜ್ ಭಾಷಣಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿವೆ.
ಜಾರ್ಜ್ ಅವರು ತಮ್ಮ ಹೇಳಿಕೆಯನ್ನು ಹಿಂಪಡೆದು ಕ್ಷಮೆಯಾಚಿಸಬೇಕು ಎಂದು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾರ್ಕ್ಸ್‌ವಾದಿ) ಹೇಳಿಕೆಯಲ್ಲಿ ಆಗ್ರಹಿಸಿದೆ. ರಾಜ್ಯ ಸರ್ಕಾರ ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಮುಖಂಡ ವಿಡಿ ಸತೀಶನ್ ಒತ್ತಾಯಿಸಿದ್ದಾರೆ.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!