October 9, 2026
Friday, October 9, 2026
spot_img

ಮಾಜಿ ಸಚಿವ ಬಿ.ಸಿ. ನಾಗೇಶ್ ನಿವಾಸಕ್ಕೆ ಬಿ.ಎಲ್. ಸಂತೋಷ್ ಭೇಟಿ: ಕುಟುಂಬಸ್ಥರಿಗೆ ಸಾಂತ್ವನ

ಹೊಸದಿಗಂತ ವರದಿ ತಿಪಟೂರು:

ಇತ್ತೀಚೆಗೆ ನಿಧನರಾದ ಮಾಜಿ ಸಚಿವ ಬಿ.ಸಿ. ನಾಗೇಶ್ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ನೀಡಿ, ಕುಟುಂಬದ ಸದಸ್ಯರಿಗೆ ಸಾಂತ್ವನ ತಿಳಿಸಿದರು.

ಬಿ.ಸಿ. ನಾಗೇಶ್ ಅವರ ಪತ್ನಿ ವೀಣಾ ನಾಗೇಶ್, ಪುತ್ರ ವಿಶ್ವದೀಪ್ ಸೇರಿದಂತೆ ಕುಟುಂಬದ ಸದಸ್ಯರನ್ನು ಭೇಟಿಯಾಗಿ ದುಃಖದಲ್ಲಿ ಭಾಗಿಯಾದ ಬಿ.ಎಲ್. ಸಂತೋಷ್ ನಾಗೇಶ್ ಅವರೊಂದಿಗಿನ ತಮ್ಮ ಆತ್ಮೀಯ ಒಡನಾಟ ಹಾಗೂ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ಜೊತೆಯಾಗಿ ಕೆಲಸ ಮಾಡಿದ ದಿನಗಳ ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.ಈ ಸಂದರ್ಭದಲ್ಲಿ ಸತ್ಯ ಗಣಪತಿ ಸೇವಾ ಟ್ರಸ್ಟ್ ಅಧ್ಯಕ್ಷ ಶ್ರೀಕಂಠ, ಬಿಜೆಪಿ ಮಂಡಲದ ತಾಲ್ಲೂಕು ಅಧ್ಯಕ್ಷ ಸತೀಶ್ ಚಿಕ್ಕಮಾರ್ಪನಹಳ್ಳಿ, ಆಯರಹಳ್ಳಿ ಪ್ರತಾಪ್, ಬಂಡಿಹಳ್ಳಿರಾಜಣ್ಣ, ಶ್ರೀನಿವಾಸ್, ಅಶ್ವಿನ್‌ಸಿಂಗ್, ಮಂಜುನಾಥ್ ಹಾವೇನಹಳ್ಳಿ ಸೇರಿದಂತೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Must Read