ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಚಿವ ಬಿ.ನಾಗೇಂದ್ರಗೆ ಚೆಕ್‌ಬೌನ್ಸ್ ಪ್ರಕರಣದಲ್ಲಿ ಶಿಕ್ಷೆ ವಿಧಿಸಲಾಗಿದೆ.
ಬಿ.ನಾಗೇಂದ್ರ ಸೇರಿದಂತೆ ಮೂವರು ಆರೋಪಿಗಳು 1 ಕೋಟಿ 25 ಲಕ್ಷ ರೂ. ದಂಡ ಪಾವತಿಸುವಂತೆ ನ್ಯಾಯಾಲಯ ಆದೇಶಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದರೆ ಒಂದು ವರ್ಷ ಸೆರೆವಾಸ ಅನುಭವಿಸಬೇಕೆಂದು 42ನೇ ಎಸಿಜೆಎಂ ನ್ಯಾಯಾಧೀಶರಾದ ಕೆ.ಎನ್.ಶಿವಕುಮಾರ್ ಆದೇಶ ಹೊರಡಿಸಿದ್ದಾರೆ.
ವಿಎಸ್ ಎಲ್ ಸ್ಟೀಲ್ ಲಿಮಿಟೆಡ್ ಮಾಜಿ ಸಚಿವ ಬಿ ನಾಗೇಂದ್ರ ಸೇರಿದಂತೆ ಮೂವರ ವಿರುದ್ಧ ಚೆಕ್ ಬೌನ್ಸ್ ಕೇಸ್ ದಾಖಲಿಸಿತ್ತು. ಈ ಪ್ರಕರಣದಲ್ಲಿ ಇಂದು ಕೋರ್ಟ್ ತೀರ್ಪು ನೀಡಿದೆ.
1 ಕೋಟಿ 23 ಲಕ್ಷ ದಂಡ ಪಾವತಿಸುವಂತೆ ಆದೇಶ ನೀಡಿದೆ. ಇದರಲ್ಲಿ 10 ಸಾವಿರ ಸರ್ಕಾರಕ್ಕೆ ಉಳಿದ ಹಣ ದೂರುದಾರ ಕಂಪೆನಿಗೆ ಪಾವತಿಸುವಂತೆ ಕೋರ್ಟ್ ಆದೇಶ ನೀಡಿದೆ. ತಪ್ಪಿದಲ್ಲಿ 1 ವರ್ಷ ಸೆರೆವಾಸದ ಶಿಕ್ಷೆ ಅನುಭವಿಸಬೇಕೆಂದು ಆದೇಶದಲ್ಲಿ ಕೋರ್ಟ್ ಸ್ಪಷ್ಟಪಡಿಸಿದೆ.