ಹೊಸದಿಗಂತ ಡಿಜಿಟಲ್ ಡೆಸ್ಕ್:
ಶತಾಯುಷಿ ಹಾಗೂ ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ನಗರದ ಖಾಸಗಿ ಗುದಗೆ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
102 ವರ್ಷದ ಭೀಮಣ್ಣ ಖಂಡ್ರೆ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ಬುಧವಾರ ಉಸಿರಾಟದ ತೊಂದರೆ ಹಾಗೂ ರಕ್ತದೊತ್ತಡದಲ್ಲಿ ಅಸಮತೋಲನ ಕಂಡುಬಂದ ಹಿನ್ನೆಲೆಯಲ್ಲಿ ವೈದ್ಯಕೀಯ ನಿಗಾವಳಿ ಹೆಚ್ಚಿಸಲಾಗಿದೆ. ಆರೋಗ್ಯದಲ್ಲಿ ಅಚಾನಕ್ ಬದಲಾವಣೆ ಕಂಡ ಹಿನ್ನೆಲೆಯಲ್ಲಿ ಕುಟುಂಬ ಸದಸ್ಯರು ಹಾಗೂ ವೈದ್ಯರು ತಕ್ಷಣ ಕ್ರಮ ಕೈಗೊಂಡಿದ್ದಾರೆ.
ಇದನ್ನೂ ಓದಿ: FOOD | ಯಮ್ಮಿ ಚಾಕ್ಲೇಟ್ ಮೈಸೂರ್ ಪಾಕ್ ತಿಂದಿದ್ದೀರಾ? ಇಲ್ಲಿದೆ ಸಿಂಪಲ್ ರೆಸಿಪಿ
ಈ ಮಾಹಿತಿ ತಿಳಿದ ಸಚಿವ ಈಶ್ವರ್ ಖಂಡ್ರೆ ಅವರು ಆಸ್ಪತ್ರೆಗೆ ಭೇಟಿ ನೀಡಿ ತಂದೆಯ ಆರೋಗ್ಯ ಸ್ಥಿತಿಯ ಕುರಿತು ವೈದ್ಯರಿಂದ ವಿವರ ಪಡೆದಿದ್ದಾರೆ. ಆಸ್ಪತ್ರೆಯ ವೈದ್ಯರ ತಂಡ ಅಗತ್ಯ ಪರೀಕ್ಷೆ ಹಾಗೂ ಚಿಕಿತ್ಸೆ ನೀಡುತ್ತಿದ್ದು, ಪ್ರಸ್ತುತ ಅವರ ಸ್ಥಿತಿ ನಿಯಂತ್ರಣದಲ್ಲಿದೆ ಎಂದು ತಿಳಿಸಲಾಗಿದೆ.
ಚಿಕಿತ್ಸೆ ಬಳಿಕ ಭೀಮಣ್ಣ ಖಂಡ್ರೆ ಅವರ ಆರೋಗ್ಯದಲ್ಲಿ ನಿಧಾನವಾಗಿ ಚೇತರಿಕೆ ಕಂಡುಬರುತ್ತಿದ್ದು, ತೀವ್ರ ಆತಂಕಕ್ಕೆ ಕಾರಣವಾಗುವಂತಹ ಪರಿಸ್ಥಿತಿ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

