ಹೊಸದಿಗಂತ ಡಿಜಿಟಲ್ ಡೆಸ್ಕ್:
ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣದಲ್ಲಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಜೆಡಿಎಸ್ ಕಾರ್ಯಕರ್ತರು ಕಲ್ಲು ಹಾಗೂ ಮೊಟ್ಟೆ ಎಸೆದಿರುವ ಘಟನೆಗೆ ನಡೆದಿದ್ದು, ಈ ಸಂಬಂಧ ಜೆಡಿಎಸ್ ನ 14 ಮಂದಿ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಚನ್ನಪಟ್ಟಣದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿ ಪೂಜೆ ವೇಳೆ ಜೆಡಿಎಸ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ವಾಕ್ಸಮರ ನಡೆದಿತ್ತು. ಆಹ್ವಾನ ಪತ್ರಿಕೆಯಲ್ಲಿ ಸ್ಥಳೀಯ ಶಾಸಕರನ್ನು ಕಡೆಗಣಿಸಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.
ಈ ವೇಳೆ ಸಿ.ಪಿ ಯೋಗೇಶ್ವರ ಕಾರು ಬರುತ್ತಿದಂತೆ ಮುತ್ತಿಗೆ ಹಾಕಿ ಕಪ್ಪು ಪಟ್ಟಿ ಪ್ರದರ್ಶನಕ್ಕೆ ಜೆಡಿಎಸ್ ಕಾರ್ಯಕರ್ತರು ಮುಂದಾಗಿದ್ದರು. ಕಲ್ಲು ಹಾಗೂ ಮೊಟ್ಟೆ ಎಸೆದಿದ್ದರು.
ಯೋಗೇಶ್ವರ್ ಕಾರಿನ ಮೇಲೆ ಕಲ್ಲು ಹಾಗೂ ಮೊಟ್ಟೆ ಎಸೆದ ಹಿನ್ನೆಲೆಯಲ್ಲಿ ಜೆಡಿಎಸ್ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದರು. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಜೆಡಿಎಸ್ ನ 14 ಮಂದಿ ವಿರುದ್ಧ ದೂರು ದಾಖಲಾಗಿದೆ.
ಜೆಡಿಎಸ್ನ 14 ಕಾರ್ಯಕರ್ತರ ವಿರುದ್ಧ ಚನ್ನಪಟ್ಟಣ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.