ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಚಿವ ಸಿ.ಪಿ ಯೋಗೇಶ್ವರ್ (CP Yogeshwar) ಅವರ ಬಾವ ಮಹದೇವಯ್ಯ (Mahadevayya) ಅವರ ಶವ ಪತ್ತೆಯಾಗಿದೆ .
ಇಂದು ಬೆಳಗ್ಗೆ ಅವರ ಕಾರು ಪತ್ತೆಯಾಗಿದ್ದು, ಅದರಲ್ಲಿ ರಕ್ತದ ಕಲೆಗಳು ಇರುವುದು ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಮಹದೇವಯ್ಯ ಅವರು ಕೊಲೆಯಾಗಿರುವ ಶಂಕೆ ವ್ಯಕ್ತವಾಗಿತ್ತುಯ. ಈ ಹಿನ್ನೆಲೆಯಲ್ಲಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದು, ಇದೀಗ ಚಾಮರಾಜನಗರದ ರಾಮಾಪುರದ ನಿರ್ಜನ ಪ್ರದೇಶವೊಂದರಲ್ಲಿ ಮಹದೇವಯ್ಯ ಅವರ ಶವ ಪತ್ತೆಯಾಗಿದೆ.
ಇದೀಗ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕೊಂಡೊಯ್ಯುತ್ತಿರೋದಾಗಿ ತಿಳಿದು ಬಂದಿದೆ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.