ಮಾಜಿ ಸಚಿವ ಹೆಚ್‌.ಡಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

ಹೊಸದಿಗಂತ ಡಿಜಿಟಲ್ ಡೆಸ್ಕ್:
 
ಪ್ರಜ್ವಲ್‌ ರೇವಣ್ಣ (Prajwal Revanna Case) ಲೈಂಗಿಕ ಹಗರಣದಲ್ಲಿ ಮಾಜಿ ಸಚಿವ ಹೆಚ್‌.ಡಿ ರೇವಣ್ಣ (HD Revanna) ಅವರ ಮಧ್ಯಂತರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಕೋರ್ಟ್‌ ಆದೇಶ ಹೊರಡಿಸಿದೆ.

ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಸಲ್ಲಿಕೆಯಾದ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಲು ನಿರಾಕರಿಸಿದೆ.

ಮಹಿಳೆಯೊಬ್ಬರನ್ನು ಅಪಹರಣ ಮಾಡಿ ಅಕ್ರಮ ಬಂಧನದಲ್ಲಿಟ್ಟಿದ್ದ ಆರೋಪದ ಮೇಲೆ ಮೈಸೂರಿನ ಕೆ.ಆರ್.‌ ನಗರ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಎಚ್.ಡಿ. ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸಿತು, ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಲಯವು ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!