Monday, August 15, 2022

Latest Posts

ಕೊರೋನಾ ಸೋಂಕಿಗೆ ಮಾಜಿ ಸಚಿವ ಕೆ.ಬಿ. ಶಾಣಪ್ಪ ಬಲಿ

ಪ್ರೀತಿಯ ಓದುಗರೇ,
ಕೋವಿಡ್ ನಿರ್ನಾಮ ನಮ್ಮ ಕೈಯಲ್ಲೇ ಇದೆ. ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಕೈ, ಮುಖವನ್ನು ಸ್ವಚ್ಛವಾಗಿ ಇಟ್ಟುಕೊಳ್ಳಿ. ನೀವೂ ಸುರಕ್ಷಿತರಾಗಿರಿ, ನಿಮ್ಮವರನ್ನೂ ಸುರಕ್ಷಿತರಾಗಿ ಇರುವಂತೆ ನೋಡಿಕೊಳ್ಳಿ.
………………………………………………

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ಸೋಂಕಿಗೆ ಮಾಜಿ ಸಂಸದ, ಮಾಜಿ ಸಚಿವ ಕೆ.ಬಿ. ಶಾಣಪ್ಪ ಸಾವನ್ನಪ್ಪಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಕೊರೋನಾ ಸೋಂಕಿಗೆ ಒಳಗಾಗಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಚಿಕಿತ್ಸೆ ಫಲಕಾರಿಯಾಗದೆ ಇಂದು ಅಸುನೀಗಿದರು.
ಜನತಾ ಪರಿವಾರದ ನಾಯಕ ಎಂದೇ ಖ್ಯಾತಿ ಪಡೆದಿದ್ದ ಶಾಣಪ್ಪ ಅವರು ಜೆ.ಎಚ್. ಪಟೇಲ್ ಅವರ ಸಂಪುಟದಲ್ಲಿ ಸಚಿವರಾಗಿದ್ದರು. ಬಳಿಕ ಬಿಜೆಪಿಗೆ ಸೇರಿದ್ದ ಶಾಣಪ್ಪ ಅವರನ್ನು ರಾಜ್ಯಸಭೆಗೆ ನಾಮನಿರ್ದೇಶನಗೊಳಿಸಲಾಗಿತ್ತು. ನಂತರ ಅವರು ವಿಧಾನ ಪರಿಷತ್​ಗೂ ನಾಮನಿರ್ದೇಶನಗೊಂಡಿದ್ದರು. ಕಳೆದ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಅವರು ಕಾಂಗ್ರೆಸ್​ಗೆ ಸೇರಿದ್ದರು.
ಮುಖ್ಯಮಂತ್ರಿ ಸಂತಾಪ
ಮಾಜಿ ಸಚಿವ ಕೆ.ಬಿ. ಶಾಣಪ್ಪ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss