ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ನಾಗೇಂದ್ರ ಅವರ ಇಡಿ ಕಸ್ಟಡಿ ಇಂದಿಗೆ ಅಂತ್ಯವಾಗಿದೆ.
ವಾಲ್ಮೀಕಿ ಹಗರಣದಲ್ಲಿ ನಾಗೇಂದ್ರ ಅವರ ಪಾತ್ರ ಕಂಡುಬಂದ ಹಿನ್ನೆಲೆ ಇಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿ 11 ದಿನಗಳ ಕಾಲ ತನಿಖೆ ನಡೆಸಿದ್ದಾರೆ. ನಾಗೇಂದ್ರ ಅವರನ್ನು ಆರಂಭದಲ್ಲಿ 6 ದಿನ ಕಸ್ಟಡಿಗೆ ಪಡೆದಿದ್ದ ಅಧಿಕಾರಿಗಳು ತನಿಖೆಗೆ ಸಹಕರಿಸುತ್ತಿಲ್ಲ ಎಂಬ ಕಾರಣ ನೀಡಿ ಮತ್ತೆ ಕಸ್ಟಡಿಗೆ ಕೇಳಿದ್ದರು. ಈ ಹಿನ್ನೆಲೆ ನ್ಯಾಯಾಲಯ ನಾಗೇಂದ್ರ ಅವರನ್ನು ಎರಡನೇ ಬಾರಿಗೆ 5 ದಿನ ಇಡಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿತ್ತು.