ಹೊಸದಿಗಂತ ಡಿಜಿಟಲ್ ಡೆಸ್ಕ್:
ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಾಜಿ ಸಚಿವ ನಾಗೇಂದ್ರ ಅವರು ಪರಪ್ಪನ ಅಗ್ರಹಾರ ಜೈಲಿಂದ ಬುಧವಾರ ಬಿಡುಗಡೆಯಾದರು.
ವಾಲ್ಮೀಕಿ ನಿಗಮ ಕೇಸ್‌ನಲ್ಲಿ ಇ.ಡಿ ಅಧಿಕಾರಿಗಳು ನಾಗೇಂದ್ರ ಅವರನ್ನು ಬಂಧಿಸಿದ್ದರು. ಬಳಿಕ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.