spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, October 16, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ!

- Advertisement -Nitte

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಛತ್ತೀಸಗಢ ಮಾಜಿ ಸಚಿವ ಹಾಗೂ ಬಿಜೆಪಿ ಹಿರಿಯ ಮುಖಂಡ ರಾಜಿಂದರ್ ಪಾಲ್ ಸಿಂಗ್ ಭಾಟಿಯಾ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

72 ವರ್ಷದ ಭಾಟಿಯಾ ತಮ್ಮ ರಾಜಾನಂದಗಾವ್ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಭಾಟಿ ನೇಣು ಬಿಗಿದುಕೊಂಡು ಆತ್ಯಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಶಂಕಿಸಿದ್ದಾರೆ.
ಸ್ಥಳದಲ್ಲಿ ಡೆತ್ ನೋಟ್ ಸಿಕ್ಕಿದೆಯೇ, ಇಲ್ಲವೇ ಎಂಬುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.

ಕಳೆದ ಮಾರ್ಚ್ ನಲ್ಲಿ ಭಾಟಿಯಾ ಕೊರೋನಾ ಸೋಂಕಿಗೆ ತುತ್ತಾಗಿದ್ದರು. ಚಿಕಿತ್ಸೆ ಪಡೆದು ಗುಣಮುಖರಾಗಿದ್ದರೂ ಕೂಡ ಕೆಲವು ಆರೋಗ್ಯ ಸಮಸ್ಯೆ ಕಾಡುತ್ತಿತ್ತು ಎಂದು ಬಿಜೆಪಿ ಮುಖಂಡರು ತಿಳಿಸಿದ್ದಾರೆ.

ರಮಣ್ ಸಿಂಗ್ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ಭಾಟಿಯಾ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಖುಜ್ಜಿ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss