ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಸಂಸದ, ಮಾಜಿ ರಾಜ್ಯ ಸಚಿವ ವಿನಯ್ ಕುಮಾರ್ ಸೊರಕೆ ಅವರ ತಾಯಿ ಸುನೀತಿ ಅಚ್ಯುತ ಸೊರಕೆ ರವರು ಅಲ್ಪಕಾಲದ ಅಸೌಖ್ಯದಿಂದ ನಿಧನ ಹೊಂದಿದರು.
ಅವರಿಗೆ 91 ವರ್ಷ ವಯಸ್ಸಾಗಿತ್ತು. ಅವರು ಮೂರು ಜನ ಪುತ್ರರು, ಎರಡು ಜನ ಪುತ್ರಿಯರು, ಎಂಟು ಮೊಮ್ಮಕ್ಕಳು, ಹಾಗೂ ಮೂರು ಮರಿ ಮಕ್ಕಳನ್ನು ಅಗಲಿದ್ದಾರೆ
ಮೃತರ ಅಂತ್ಯ ಸಂಸ್ಕಾರ ಇಂದು ಮಧ್ಯಾಹ್ನ 1.30 ರ ನಂತರ ಸ್ವಗೃಹ ಪುತ್ತೂರು ತಾಲೂಕಿನ ಸರ್ವೇ ಗ್ರಾಮದ ಸೊರಕೆಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.