ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ವಿಶ್ವ ಸುಂದರಿ ಸ್ಪರ್ಧಿ ಶೆರಿಕಾ ಡಿ ಅರ್ಮಾಸ್ (26) ನಿಧನರಾಗಿದ್ದಾರೆ.
ಗರ್ಭ ಕಂಠದ ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
2015ರ ವಿಶ್ವಸುಂದರಿ ಸ್ಪರ್ಧೆಯಲ್ಲಿ ಉರುಗ್ವೆಯನ್ನು ಪ್ರತಿನಿಧಿಸಿದ್ದ ಅವರು ಅ.13ರಂದು 26ನೇ ವಯಸ್ಸಿನಲ್ಲೇ ಮೃತಪಟ್ಟಿದ್ದಾರೆ.
ಶೆರಿಕಾ ಸಾವಿನ ಸುದ್ದಿ ಕೇಳಿ ಅಭಿಮಾನಿಗಳು ನೊಂದುಕೊಂಡಿದ್ದು, ಅವರ ನಿಧನಕ್ಕೆ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.