ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅಧಿಕೃತವಾಗಿ ಬಿಜೆಪಿ ಸೇರ್ಪಡೆ!

ಹೊಸದಿಗಂತ ಡಿಜಿಟಲ್ ಡೆಸ್ಕ್:

ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ್ದಕ್ಕೆ ಅಸಮಾಧಾನಗೊಂಡಿರುವ ಮಾಜಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಇಂದು ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ.

ನಗರದ ಬಿಜೆಪಿಯ ಜಗನ್ನಾಥ ಭವನದಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು. ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸಮ್ಮುಖದಲ್ಲಿ ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿಗೆ ಸೇರ್ಪಡೆಯಾದರು.

ಯಡಿಯೂರಪ್ಪ ಅವರು ಪಕ್ಷದ ಧ್ವಜ ನೀಡಿ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು. ಬೆಂಗಳೂರು ಉತ್ತರ ಕ್ಷೇತ್ರದ ಅಭ್ಯರ್ಥಿ ಶೋಭಾ ಕರಂದ್ಲಾಜೆ, ರಾಜ್ಯಸಭೆ ಸದಸ್ಯ ಲೆಹರ್ ಸಿಂಗ್, ಶಾಸಕ ಸುನೀಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಯಡಿಯೂರಪ್ಪ ಅವರು, ಅಖಂಡ ಶ್ರೀನಿವಾಸ ಮೂರ್ತಿ ಬಿಜೆಪಿ ಸೇರಿ ನಮಗೆ ದೊಡ್ಡ ಶಕ್ತಿ ತಂದಿದ್ದಾರೆ. ಅವರು ಎರಡೂವರೆಯಿಂದ ಮೂರು ಲಕ್ಷ ಮತಗಳ ಅಂತರದಿಂದ ಗೆಲ್ಲುತ್ತಾರೆ ಎಂಬ ವಿಶ್ವಾಸ ನನಗಿದೆ. ಅಖಂಡ ಚುನಾವಣೆ ಸಮಯದಲ್ಲಿ ಬಂದಿರೋದ್ರಿಂದ ಶೋಭಾ ಅವರು ದೊಡ್ಡ ಅಂತರದಲ್ಲಿ ಗೆಲ್ಲಲು ಅನುಕೂಲ ಆಗಲಿದೆ ಎಂದು ಆಶಯ ವ್ಯಕ್ತಪಡಿಸಿದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!