ಇಂದು ಬಿಜೆಪಿಗೆ ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಸೇರ್ಪಡೆ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಇಂದು ಬಿಜೆಪಿ ಸೇರಲಿದ್ದಾರೆ. ಬಿಜೆಪಿ ರಾಜ್ಯ ಕಚೇರಿಯಲ್ಲಿ ಬಿ.ಎಸ್. ಯಡಿಯೂರಪ್ಪ ಅವರ ಸಮ್ಮುಖದಲ್ಲಿ ಅಖಂಡ ಶ್ರೀನಿವಾಸಮೂರ್ತಿ ಬಿಜೆಪಿ ಸೇರಲಿದ್ದಾರೆ.

ಈ ಸಂದರ್ಭದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕ ವಿ. ಸುನಿಲ್ ಕುಮಾರ್ ಉಪಸ್ಥಿತರಿರುತ್ತಾರೆ.

2018ರ ವಿಧಾನಸಭಾ ಚುನಾವಣೆಯಲ್ಲಿ ಪುಲಿಕೇಶಿ ನಗರ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅಖಂಡ ಶ್ರೀನಿವಾಸಮೂರ್ತಿ ದಾಖಲೆ ಅಂತರದಿಂದ ಗೆಲುವು ಸಾಧಿಸಿದ್ದರು. ಕಳೆದ ಚುನಾವಣೆಯಲ್ಲಿ ಅಖಂಡ ಶ್ರೀನಿವಾಸಮೂರ್ತಿ ಅವರಿಗೆ ಕಾಂಗ್ರೆಸ್ ಟಿಕೆಟ್ ಸಿಕ್ಕಿರಲಿಲ್ಲ. ಹಾಗಾಗಿ ಬಿಎಸ್ಪಿಯಿಂದ ಸ್ಪರ್ಧಿಸಿದ್ದ ಅವರು ಸೋಲು ಕಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!