ಹೊಸದಿಗಂತ ಡಿಜಿಟಲ್ ಡೆಸ್ಕ್:
ಮಾಜಿ ಶಾಸಕ, ಶಿಕ್ಷಣ ತಜ್ಞ ಹೆಚ್.ಡಿ.ಚೌಡಯ್ಯ(94) ನಿಧನರಾಗಿದ್ದಾರೆ.
ಮಂಡ್ಯ ಜಿಲ್ಲೆಯ ಹಿರಿಯ ರಾಜಕಾರಣಿ, ಕಾವೇರಿ ಹೋರಾಟಗಾರ ಚೌಡಯ್ಯ ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.
ಚೌಡಯ್ಯ ಅವರ ನಿಧನಕ್ಕೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಸಂತಾಪ ಸೂಚಿಸಿದ್ದು, ನಿಸ್ವಾರ್ಥ ರಾಜಕಾರಣದ ಕೊಂಡಿ ಕಳಚಿದೆ ಎಂದಿದ್ದಾರೆ.
ನಿನ್ನೆ ತಡರಾತ್ರಿ ಮಂಡ್ಯದ ಹೊಳಲು ಗ್ರಾಮದ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ.
ನಾಲ್ಕು ಬಾರಿ ವಿಧಾನ ಪರಿಷತ್ ಸದಸ್ಯರಾಗಿದ್ದರು. ಮಂಡ್ಯದ ಪಿ.ಇ.ಟಿ ಶಿಕ್ಷಣ ಸಂಸ್ಥೆಯ ಮಾಜಿ ಅಧ್ಯಕ್ಷರೂ ಆಗಿದ್ದರು. ದಿ.ಮಾದೇಗೌಡರೊಂದಿಗೆ ಕಾವೇರಿ ಹೋರಾಟದಲ್ಲೂ ಭಾಗಿಯಾಗಿದ್ದರು.