ಹೊಸದಿಗಂತ ಡಿಜಿಟಲ್ ಡೆಸ್ಕ್:
ವಂಚನೆ ಪ್ರಕರಣದಲ್ಲಿ ಜೈಲು ಸೇರಿದ್ದ ಐಶ್ವರ್ಯಗೌಡ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಂಡ್ಯ ಜಿಲ್ಲೆಯ ಮಳವಳ್ಳಿಯ ಶಾಸಕ ನರೇಂದ್ರಸ್ವಾಮಿ ಅವರಿಗೆ ಹಣ ನೀಡಿದ್ದಾರೆ ಎಂದು ಮಾಜಿ ಶಾಸಕ ಅನ್ನದಾನಿ ಆರೋಪ ಮಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಐಶ್ವರ್ಯಗೌಡ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದವರು. ಈಕೆ ಮಂಡ್ಯ ಜಿಲ್ಲೆಯಲ್ಲೂ ಹಲವರಿಗೆ ಕೋಟ್ಯಂತರ ರೂಪಾಯಿ ವಂಚನೆ ಮಾಡಿದ್ದಾರೆ. ಈಕೆಯ ಮೋಸದ ಜಾಲಕ್ಕೆ ಕಾಂಗ್ರೆಸ್‌ನ ಒಂದಷ್ಟು ಮುಖಂಡರು ಬೆನ್ನೆಲುಬಾಗಿ ನಿಂತಿದ್ದಾರೆ ಎಂದು ದೂರಿದ್ದಾರೆ.
ಐಶ್ವರ್ಯಗೌಡರನ್ನ ಮಂಪರು ಪರೀಕ್ಷೆಗೆ ಒಳಪಡಿಸಿದರೆ, ಎಲ್ಲಾ ವಿಚಾರಗಳು ಬೆಳಕಿಗೆ ಬರುತ್ತವೆ. ಐಶ್ವರ್ಯಗೌಡರ ವಂಚನೆ ಪ್ರಕರಣವನ್ನ ಸಿಬಿಐಗೆ ನೀಡಬೇಕೆಂದು ಮಾಜಿ ಶಾಸಕ ಅನ್ನದಾನಿ ಆಗ್ರಹಿಸಿದ್ದಾರೆ.