ಹೊಸದಿಗಂತ ಡಿಜಿಟಲ್ ಡೆಸ್ಕ್:
ರಾಜ್ಯ ಚುನಾವಣಾ ಕಣ ರಂಗೇರುತ್ತಿದ್ದು, ಪಕ್ಷಾಂತರ ಪರ್ವ ಜೋರಾಗಿದ್ದು, ನಿನ್ನೆಯಷ್ಟೇ ಜೆಡಿಎಸ್ ತೊರೆದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಎ.ಟಿ.ರಾಮಸ್ವಾಮಿ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ದೆಹಲಿಯಲ್ಲಿ ಕೇಂದ್ರ ಸಚಿವ ಅನುರಾಗ್ ಠಾಕೂರ್ ಸಮ್ಮುಖದಲ್ಲಿ ಎ.ಟಿ.ರಾಮಸ್ವಾಮಿ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಿದ್ದಾರೆ.
ಜೆಡಿಎಸ್‍ನಲ್ಲಿದ್ದ (JDS) ಎ.ಟಿ ರಾಮಸ್ವಾಮಿ ಅವರು ಶುಕ್ರವಾರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ಈ ಬೆನ್ನಲ್ಲೇ ಇಂದು ದೆಹಲಿಯಲ್ಲಿರುವ ಬಿಜೆಪಿಯ ಪ್ರಧಾನ ಕಚೇರಿಯಲ್ಲಿ, ಕೇಂದ್ರ ಸಚಿವ ಅನುರಾಗ್ ಸಿಂಗ್ ಠಾಕೂರ್ (Anurag Singh Thakur) ನೇತೃತ್ವದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಈ ಮೂಲಕ ಬಿಜೆಪಿಯ ಅರಕಲಗೂಡು ಕ್ಷೇತ್ರ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ.