ಹೊಸದಿಗಂತ ಡಿಜಿಟಲ್ ಡೆಸ್ಕ್:
ಕರ್ನಾಟಕ ಹಾಲು ಮಾರಾಟ ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷರಾಗಿ ಭೀಮಾ ನಾಯ್ಕ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಸಿದ್ದರಾಮಯ್ಯ ಅವರ ಆಪ್ತರಾಗಿರುವ ಮಾಜಿ ಶಾಸಕ ಭೀಮಾ ನಾಯ್ಕ್ ಕೆಎಂಎಫ್ ಅಧ್ಯಕ್ಷ ಸ್ಥಾನದ ಆಕಾಂಕ್ಷಿಯಾಗಿದ್ದರು. ನಿರೀಕ್ಷೆಯಂತೆ ಕಾಂಗ್ರೆಸ್ ಶಾಸಕ ಭೀಮಾ ನಾಯ್ಕ್ ಅವರಿಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳಿ (ಕೆಎಂಎಫ್) ಅಧ್ಯಕ್ಷ ಸ್ಥಾನ ದೊರೆತಿದೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ, ಬಾಲಚಂದ್ರ ಜಾರಕಿಹೊಳಿ ಅವರ ಅಧ್ಯಕ್ಷ ಸ್ಥಾನ ತೆರವಾಗಿದ್ದು, ಚುನಾವಣೆ ಮೂಲಕ ಹೊಸ ಅಧ್ಯಕ್ಷರನ್ನು ಆಯ್ಕೆ ಮಾಡಲು ನಿರ್ಧರಿಸಲಾಗಿತ್ತು. ಆದರೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕಾಗಿ ಯಾರು ನಾಮಪತ್ರ ಸಲ್ಲಿಸದಿರುವುದರಿಂದ ಭೀಮಾ ನಾಯ್ಕ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.