ಕೊಳ್ಳೇಗಾಲ ಕ್ಷೇತ್ರದ ಮಾಜಿ ಶಾಸಕ, ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್ ಜಯಣ್ಣ ನಿಧನ

ಹೊಸದಿಗಂತ ವರದಿ ಚಾಮರಾಜನಗರ:

ಕೊಳ್ಳೇಗಾಲ ಕ್ಷೇತ್ರದ ಮಾಜಿ ಶಾಸಕ ಹಾಗೂ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷ ಎಸ್ ಜಯಣ್ಣ ಇಂದು 12 ಗಂಟೆ ಸಮಯದಲ್ಲಿ ಹೃದಯಾಘಾತದಿಂದ ಕೊಳ್ಳೇಗಾಲದಲ್ಲಿ ನಿಧನರಾಗಿದ್ದಾರೆ.

ಜಯಣ್ಣ ಅವಿವಾಹಿತರಾಗಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಪ್ತರಾಗಿದ್ದರು. ಜಯಣ್ಣ ಅವರು ಎರಡು ಬಾರಿ ಕೊಳ್ಳೇಗಾಲ ಶಾಸಕ 1994 ರಲ್ಲಿ ಜೆಡಿಎಸ್ ನಿಂದ ಮತ್ತು 2013 ರಿಂದ 2018 ರವರೆಗೆ ಕಾಂಗ್ರೆಸ್ ನಿಂದ ಶಾಸಕರಾಗಿದ್ದರು.

ಪ್ರಸ್ತುತ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರಾಗಿ ನೇಮಕಗೊಂಡಿದ್ದರು. ಶನಿವಾರ ಕೊಳ್ಳೆಗಾಲಕ್ಕೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಅವರು ಜಯಣ್ಣ ಅವರ ನೂತನ ನಿವಾಸಕ್ಕೆ ಭೇಟಿ ನೀಡಿ ನಾಮಫಲಕ ಅನಾವರಣ ಮಾಡಿದ್ದರು. ನಾಡಿದ್ದು ಡಿ.12 ರಂದು ಜಯಣ್ಣ ಅವರ ನೂತನ ಮನೆಯ ಗೃಹಪ್ರವೇಶ ಕಾರ್ಯಕ್ರಮವಿತ್ತು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!