ಹೊಸದಿಗಂತ ಡಿಜಿಟಲ್ ಡೆಸ್ಕ್:
ಕಾರ್ಕಳದ ಮಾಜಿ ಶಾಸಕ ದಿವಂಗತ ಗೋಪಾಲ್ ಭಂಡಾರಿ ಅವರ ಪುತ್ರ ಸುದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹೆಬ್ರಿ ತಾಲೂಕು ನಿವಾಸಿಯಾಗಿರುವ ಸುದೀಪ್ ಬಾರ್ಕೂರಿನಲ್ಲಿ ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸದ್ಯದ ಮಾಹಿತಿ ಪ್ರಕಾರ ಸುದೀಪ್ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದ್ದರು ಎಂದು ತಿಳಿದು ಬಂದಿದೆ. ಬ್ರಹ್ಮಾವರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ರೈಲಿಗೆ ತಲೆ ಕೊಟ್ಟು ಸಾವಿಗೆ ಶರಣಾದ ಮಾಜಿ ಶಾಸಕರ ಪುತ್ರ
