ಜನಸ್ಪಂದನ ಕಾರ್ಯಕ್ರಮದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ ಮಾಜಿ ಎಂಎಲ್ಸಿ ಲಕ್ಷ್ಮೀನಾರಾಯಣ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ಕಾಂಗ್ರೆಸ್ ಗೆ ಗುಡ್ ಬೈ ಹೇಳಿದ್ದ ಮಾಜಿ ಪರಿಷತ್ ಸದಸ್ಯ ಎಂ ಡಿ ಲಕ್ಷ್ಮೀನಾರಾಯಣ ಇದೀಗ ಸೆ.10ರಂದು ಅಧಿಕೃತವಾಗಿ ಬಿಜೆಪಿ ಸೇರ್ಪಡೆಗೊಳ್ಳುವುದಾಗಿ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸೆ.10ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಬಿಜೆಪಿ ಜನಸ್ಪಂದನ ಕಾರ್ಯಕ್ರಮದಲ್ಲಿ ಬೆಳಿಗ್ಗೆ 11.30ಕ್ಕೆ ಬಿಜೆಪಿ ಪಕ್ಷವನ್ನು ಸೇರ್ಪಡೆಗೊಳ್ಳುತ್ತಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.
ಆಗಸ್ಟ್ 31 ರಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಪತ್ರಬರೆದಿದ್ದಂತ ಅವರು, ಕಾಂಗ್ರೆಸ್ ಪಕ್ಷದ ಇತ್ತೀಚಿನ ನಡವಳಿಕೆಯಿಂದ ಬೇಸತ್ತು, ಸ್ವಇಚ್ಛೆಯಿಂದ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿರೋದಾಗಿ ತಿಳಿಸಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!