ಕೇಂದ್ರ ಸಚಿವ ಡಾ.ಎಸ್.ಜೈಶಂಕರ್ ಸಮ್ಮುಖದಲ್ಲಿ ಬಿಜೆಪಿ ಸೇರಿದ ಜೆಡಿಎಸ್ ಯ ಮಾಜಿ ಎಂಎಲ್ಸಿ

ಹೊಸದಿಗಂತ ಡಿಜಿಟಲ್‌ ಡೆಸ್ಕ್:‌

ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮರಿಲಿಂಗೇಗೌಡ ಸಹಿತ ಹಲವರು ಶನಿವಾರ ಜೆಡಿಎಸ್ ಗೆ ವಿದಾಯ ಹೇಳಿ ಬಿಜೆಪಿ ಸೇರ್ಪಡೆಯಾದರು.

ಬೆಂಗಳೂರಿನ ಹನುಮಂತನಗರದ ಮನೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಡಾ.ಎಸ್.ಜೈಶಂಕರ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಸಿ ಎನ್ ಅಶ್ವತ್ಥನಾರಾಯಣ ಅವರ ಸಮ್ಮುಖದಲ್ಲಿ ಪಕ್ಷದ ಕೇಸರಿ ಅಂಗವಸ್ತ್ರವನ್ನು ಹಾಕುವ ಮೂಲಕ ಬಿಜೆಪಿಗೆ ಬರಮಾಡಿಕೊಳ್ಳಲಾಯಿತು.
ಮರಿಲಿಂಗೇಗೌಡರ ಮನೆಯಲ್ಲೇ ಜೈಶಂಕರ್ ಅವರು ಗೌಡರನ್ನು ಸ್ವಾಗತಿಸಿದರು. ಈ ವೇಳೆ ತಾಪಂ ಮಾಜಿ ಅಧ್ಯಕ್ಷ ಈರೇಗೌಡ, ಬಮೂಲ್ ಮಾಜಿ ನಿರ್ದೇಶಕ ಮರಿಯಪ್ಪ ಸೇರಿದಂತೆ ಇತರರು ಬಿಜೆಪಿ ಸೇರಿದರು.

ಮರಿಲಿಂಗೇಗೌಡರು ಮಾತನಾಡಿ, ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬೊಮ್ಮಾಯಿಯವರ ಜನಪರ ಮತ್ತು ಬದ್ಧತೆಯ ಆಡಳಿತ ಕಂಡು ಬಿಜೆಪಿ ಸೇರುತ್ತಿದ್ದೇನೆ. ದೇಶವನ್ನು ಬಲಿಷ್ಠ ವಾಗಿ ಕಟ್ಟುವುದು ಮತ್ತು ಪ್ರಜಾಪ್ರಭುತ್ವದ ಉಳಿವು ಬಿಜೆಪಿಯಿಂದ ಮಾತ್ರ ಸಾಧ್ಯ ಎಂದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!