ಕೆಪಿಸಿಸಿ ನೂತನ ಕಾರ್ಯಾಧ್ಯಕ್ಷರಾಗಿ ಬಿ.ಎನ್‌. ಚಂದ್ರಪ್ಪ ನೇಮಕ

ಹೊಸದಿಗಂತ ಡಿಜಿಟಲ್‌ ಡೆಸ್ಕ್‌ :

ಅಖಿಲ ಭಾರತ ಕಾಂಗ್ರೆಸ್ ಸಮಿತಿಯು (ಎಐಸಿಸಿ), ಚಿತ್ರದುರ್ಗದ ಮಾಜಿ ಸಂಸದ ಬಿ ಎನ್‌ ಚಂದ್ರಪ್ಪ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಸಮಿತಿಯ (ಕೆಪಿಸಿಸಿ) ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿದೆ.

ಈ ಸ್ಥಾನದಲ್ಲಿದ್ದ ಮಾಜಿ ಸಂಸದ ಆರ್. ಧ್ರುವನಾರಾಯಣ ಅವರು ಇತ್ತೀಚೆಗೆ ಹೃದಯಾಘಾತದಿಂದ ನಿಧನರಾದರು.

ಕಾಂಗ್ರೆಸ್‌ ಅಧ್ಯಕ್ಷರಾಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಚಂದ್ರಪ್ಪ ಅವರನ್ನು ನೇಮಕ ಮಾಡಿದ್ದು, ಈ ಆದೇಶವು ಇಂದಿನಿಂದಲೇ ಜಾರಿಗೆ ಬರಲಿದೆ ಎಂದು ಎಐಸಿಸಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಚಿಕ್ಕಮಗಳೂರು ಜಿಲ್ಲಾ ಪರಿಷತ್ ಸದಸ್ಯರಾಗುವ ಮೂಲಕ ಚಂದ್ರಪ್ಪ ಅವರು ತಮ್ಮ ರಾಜಕೀಯ ಜೀವನವನ್ನು ಆರಂಭಿಸಿದ್ದರು. ಬಿ ಎನ್‌ ಚಂದ್ರಪ್ಪ ಅವರು 2014ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಆದರೆ 2019ರಲ್ಲಿ ಸೋಲು ಕಂಡಿದ್ದರು.

ಈ ಸುದ್ದಿಯನ್ನು ಇತರರ ಜೊತೆಗೂ ಹಂಚಿಕೊಳ್ಳಿ

LEAVE A REPLY

Please enter your comment!
Please enter your name here

error: Content is protected !!