ಹೊಸದಿಗಂತ ಡಿಜಿಟಲ್ ಡೆಸ್ಕ್:
ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷರಾಗಿ ಡಿ.ಕೆ.ಸುರೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಮೂಲ್ ಆಡಳಿತ ಮಂಡಳಿ ಅಧ್ಯಕ್ಷ ಸ್ಥಾನಕ್ಕೆ ಡಿ.ಕೆ.ಸುರೇಶ್ ಅವರು ಬೆಂಗಳೂರು ಡೈರಿ ಸರ್ಕಲ್ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದರು. ಈ ಸ್ಥಾನಕ್ಕೆ ಬೇರೆ ಯಾರೂ ಉಮೇದುವಾರಿಕೆ ಸಲ್ಲಿಸದ ಕಾರಣ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಂತರ ಮಾತನಾಡಿದ ಅವರು, ಬೆಂಗಳೂರು ಸಹಕಾರ ಹಾಲು ಒಕ್ಕೂಟ ನಿಯಮಿತನಲ್ಲಿ 16 ನಿರ್ದೇಶಕರ ಪೈಕಿ 14 ಜನ ಚುನಾವಣೆ ಮೂಲಕ ಆರಿಸಲಾಗಿದ್ದು, ಇಬ್ಬರು ಸರ್ಕಾರದಿಂದ ನಾಮ ನಿರ್ದೇಶನಗೊಂಡಿದ್ದಾರೆ.
ನಮ್ಮ ಪಕ್ಷದ ಅಧ್ಯಕ್ಷರಾದ ಡಿಸಿಎಂ ಡಿ.ಕೆ.ಶಿವಕುಮಾರ್, ರಾಮನಗರ ಜಿಲ್ಲಾ ಉಸ್ತುವಾರಿ ಸಚಿವರಾದ ರಾಮಲಿಂಗಾರೆಡ್ಡಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ.ಹೆಚ್.ಮುನಿಯಪ್ಪ, ಶಾಸಕರಾದ ಬಾಲಕೃಷ್ಣ, ಸಿ.ಪಿ.ಯೋಗೇಶ್ವರ್, ಇಕ್ಬಾಲ್ ಹುಸೇನ್, ಶಿವಣ್ಣ, ಶರತ್ ಬಚ್ಚೇಗೌಡ, ಕೃಷ್ಣ ಬೈರೇಗೌಡರು ಸೇರಿದಂತೆ ಬಮೂಲ್ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಸಕರ ಸರ್ವಸಮ್ಮತದ ತೀರ್ಮಾನದಂತೆ ನನ್ನನ್ನು ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.