Saturday, April 1, 2023

Latest Posts

ಮಾಜಿ ಸಂಸದ ಧ್ರುವನಾರಾಯಣ್‌ ನಿಧನ ಹಿನ್ನೆಲೆ ಪ್ರಜಾಧ್ವನಿ ಯಾತ್ರೆ ರದ್ದು

ಹೊಸದಿಗಂತ ಡಿಜಿಟಲ್‌ ಡೆಸ್ಕ್ ‌:

ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್‌.ಧ್ರುವನಾರಾಯಣ ನಿಧನದ ಹಿನ್ನೆಲೆಯಲ್ಲಿ ಇಂದು ರಾಮನಗರದಲ್ಲಿ ಜರುಗಬೇಕಿದ್ದ ಪ್ರಜಾಧ್ವನಿ ಯಾತ್ರೆಯನ್ನು ರದ್ದು ಮಾಡಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಇಂದು ಹಾಗೂ ನಾಳೆ ರಾಮನಗರ, ಹೊನ್ನಾಳಿ, ಹರಿಹರ, ರಾಣೆಬೆನ್ನೂರುಗಳಲ್ಲಿ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆಯನ್ನು ಆಯೋಜಿಸಲಾಗಿತ್ತು. ಇದರಲ್ಲಿ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಮುಂತಾದ ನಾಯಕರು ಭಾಗವಹಿಸಬೇಕಿತ್ತು. ಧ್ರುವನಾರಾಯಣ ಅವರ ಸಾವಿಗೆ ಸಂತಾಪ ಸೂಚಕವಾಗಿ ಇದೀಗ ಈ ಎಲ್ಲಾ ಕಾರ್ಯಕ್ರಮಗಳು ರದ್ದಾಗಿದೆ.

ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವ ನಾರಾಯಣ್‌ ಅವರು ಶನಿವಾರ ಹೃದಯಾಘಾತದಿಂದ (Heart Attack) ಮೈಸೂರಿನ (Mysuru) ಡಿಆರ್‌ಎಂಎಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಕಳೆದ 2 ವರ್ಷದಿಂದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡುತ್ತಿದ್ದರು. ಈ ಬಾರಿ ನಂಜನಗೂಡಿನಿಂದ ವಿಧಾನಸಭೆ ಚುನಾವಣೆ ಸ್ಪರ್ಧೆ ಮಾಡಲು ಸಿದ್ಧತೆ ಮಾಡಿಕೊಂಡಿದ್ದರು. 2 ಬಾರಿ ಶಾಸಕ ಒಂದು ಬಾರಿ ಸಂಸದರಾಗಿ ಆಯ್ಕೆಯಾಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!