Thursday, December 8, 2022

Latest Posts

ಮಾಜಿ ಸಂಸದ ಕೋಳೂರ ಬಸವನಗೌಡ ನಿಧನ

ಹೊಸದಿಗಂತ ವರದಿ, ಬಳ್ಳಾರಿ:

ಮಾಜಿ ಸಂಸದ ಹಾಗೂ ವೀರಶೈವ ವಿದ್ಯಾವರ್ಧಕ ಸಂಘದ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ ಕೋಳೂರ ಬಸವನಗೌಡ ಅವರು ಶುಕ್ರವಾರ ‌ನಿಧನರಾದರು.
ಬಳ್ಳಾರಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಸದಸ್ಯರಾಗಿ ಚುನಾಯಿತಗೊಂಡಿದ್ದು, ಅವದಿಯಲ್ಲಿ ಅನೇಕ ಜನಪರ ಅಭಿವೃದ್ಧಿ ಕೆಲಸಗಳನ್ನು ಮಾಡಿ ಇತರರಿಗೆ ಮಾದರಿಯಾಗಿದ್ದರು. ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು, ಶುಕ್ರವಾರ ನಿಧನರಾಗಿದ್ದಾರೆ.
ಮೃತರ ಅಂತ್ಯಕ್ರೀಯೆ ನಗರದಲ್ಲಿ ನ.26 ರಂದು ಮಧ್ಯಾಹ್ನ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ. ಸಚಿವ ಬಿ.ಶ್ರೀರಾಮುಲು, ಸಂಸದ ವೈ.ದೇವೇಂದ್ರಪ್ಪ, ಶಾಸಕರಾದ ಬಿ.ನಾಗೇಂದ್ರ, ಗಾಲಿ ಸೋಮಶೇಖರ್ ರೆಡ್ಡಿ, ಎಮ್ಮೆಲ್ಸಿ ವೈ.ಎಂ.ಸತೀಶ್, ಪಾಲಿಕೆ ಮೇಯರ್ ರಾಜೇಶ್ವರಿ ಸುಬ್ಬರಾಯಡು ಸೇರಿದಂತೆ ಅನೇಕ ಗಣ್ಯರು ಮೃತರ ಆತ್ಮಕ್ಕೆ ದೇವರು ಶಾಂತಿ, ನೆಮ್ಮದಿ ನೀಡಲಿ, ಅವರ ಕುಟುಂಬದ ಸದಸ್ಯರಿಗೆ ದುಖಃ ಭರಿಸುವ ಶಕ್ತಿಯನ್ನು ದೇವರು ದಯಪಾಲಿಸಲಿ ಎಂದು ಪ್ರಾರ್ಥಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Latest Posts

Don't Miss

error: Content is protected !!