ಹೊಸದಿಗಂತ ಡಿಜಿಟಲ್ ಡೆಸ್ಕ್:
ಅತ್ಯಾಚಾರ ಪ್ರಕರಣದಲ್ಲಿ ಬಂಧನವಾಗಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಮುಂದೂಡಿದೆ.
ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ಪೀಠವು, ಆಕ್ಷೇಪಣೆ ಸಲ್ಲಿಸಲು ಎಸ್ಐಟಿಗೆ ನೊಟೀಸ್ ನೀಡಿ, 2 ವಾರಗಳ ಕಾಲ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ.
ಸರ್ಕಾರದ ಪರ ಎಸ್ಪಿಸಿ ಜಗದೀಶ್ ಹಾಜರಾಗಿದ್ದರು. ಪ್ರಜ್ವಲ್ ರೇವಣ್ಣ ಪರ ವಕೀಲರು, ವಿಚಾರಣೆ ತ್ವರಿತವಾಗಿ ನಡೆಸುವಂತೆ ಜಡ್ಜ್ಗೆ ಮನವಿ ಮಾಡಿದರು. ಇದಕ್ಕೆ ನ್ಯಾಯಮೂರ್ತಿಗಳು ಪ್ರತಿಕ್ರಿಯಿಸಿ, ಆಕ್ಷೇಪಣೆ ಸಲ್ಲಿಕೆ ಆಗಲಿ ನೋಡೋಣ ಎಂದು ಉತ್ತರಿಸಿ, 2 ವಾರಗಳ ಕಾಲ ವಿಚಾರಣೆ ಮುಂದೂಡಿದರು.