ಹೊಸ ದಿಗಂತ ಡಿಜಿಟಲ್ ಡೆಸ್ಕ್:
ಬೆಳಗಾವಿ ನಗರದಲ್ಲಿ ಡಿಸಿಸಿ ಬ್ಯಾಂಕ್ ಚುನಾವಣೆ ವೇಳೆಯಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಅವರು ವಾಲ್ಮೀಕಿ ಸಮುದಾಯದ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಆರೋಪ ಕೇಳಿ ಬಂದಿದ್ದು. ಈ ಹಿನ್ನಲೆಯಲ್ಲಿ ಅವರ ವಿರುದ್ಧ ಅಟ್ರಾಸಿಟಿ ಕೇಸ್ ದಾಖಲಾಗಿದೆ.
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ನಡೆದಂತ ಸಂದರ್ಭದಲ್ಲಿ ಮಾಜಿ ಸಂಸದ ರಮೇಶ್ ಕತ್ತಿ ಅವರು ವಾಲ್ಮೀಕಿ ಸಮುದಾಯದ ಬಗ್ಗೆ ಅವಾಚ್ಯ ಪದ ಬಳಕೆ ಮಾಡಿರುವ ಬಗ್ಗೆ ರಾಜಶೇಖರ ತಳವಾರ ಎಂಬುವರು ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಗೆ ರಮೇಶ್ ಕತ್ತಿ ವಿರುದ್ಧ ದೂರು ನೀಡಿದ್ದರು. ಈ ದೂರು ಆಧರಿಸಿ ಬೆಳಗಾವಿಯ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ರಮೇಶ್ ಕತ್ತಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಎಫ್ಐಆರ್ ನಲ್ಲಿ ಅಟ್ರಾಸಿಟಿ ಕೇಸ್ ದಾಖಲಿಸಲಾಗಿದೆ.