April 28, 2026
Tuesday, April 28, 2026
spot_img

ಬಾಬರ್ ಆಝಂ ‘ಮಾನಸಿಕವಾಗಿ ಅನರ್ಹ’ ಎಂದ ಪಾಕ್ ಮಾಜಿ ಕ್ರಿಕೆಟಿಗ

ಹೊಸದಿಗಂತ ಡಿಜಿಟಲ್ ಡೆಸ್ಕ್:

ಬಾಬರ್ ಆಝಂ ಪಾಕಿಸ್ತಾನದ ಪ್ರಮುಖ ಬ್ಯಾಟರ್‌ಗಳಲ್ಲೊಬ್ಬರಾಗಿದ್ದರೂ ಕಳೆದ ಕೆಲ ತಿಂಗಳಿಂದ ಅವರ ಪ್ರದರ್ಶನ ತೀರಾ ನಿರಾಶಾಜನಕವಾಗಿದೆ. ಒಮ್ಮೆ ರನ್ ಮಳೆ ಹರಿಸುತ್ತಿದ್ದ ಬಾಬರ್, ಈಗ ನಿರಂತರ ವೈಫಲ್ಯದಿಂದ ಟೀಕೆಗೆ ಗುರಿಯಾಗುತ್ತಿದ್ದಾರೆ. ಇತ್ತೀಚೆಗೆ ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯಲ್ಲೂ ಅವರ ಬ್ಯಾಟ್ ಮೌನವಾಗಿದ್ದರಿಂದ ಅಭಿಮಾನಿಗಳು ಹಾಗೂ ಕ್ರಿಕೆಟ್ ತಜ್ಞರು ಪ್ರಶ್ನೆಗಳನ್ನು ಎತ್ತಿದ್ದಾರೆ.

ಟಿ20 ವಿಶ್ವಕಪ್ ಬಳಿಕ ಪಾಕಿಸ್ತಾನ ಕ್ರಿಕೆಟ್ ತಂಡ ಬಾಂಗ್ಲಾದೇಶ ಪ್ರವಾಸ ಕೈಗೊಂಡಿದ್ದು, ಏಕದಿನ ಸರಣಿಗೆ ಬಾಬರ್ ಅವರನ್ನು ಆಯ್ಕೆ ಮಾಡಲಾಗಿಲ್ಲ. ಈ ನಿರ್ಧಾರ ಕ್ರಿಕೆಟ್ ವಲಯದಲ್ಲಿ ಚರ್ಚೆಗೆ ಕಾರಣವಾಯಿತು. ತಂಡದ ಆಯ್ಕೆದಾರ ಆಕಿಬ್ ಜಾವೇದ್, ಬಾಬರ್ ಗಾಯಗೊಂಡಿರುವ ಕಾರಣ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎಂದು ಸ್ಪಷ್ಟನೆ ನೀಡಿದ್ದರು.

ಆದರೆ ಈ ಹೇಳಿಕೆಯನ್ನು ಪ್ರಶ್ನಿಸಿರುವ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ಬಸಿತ್ ಅಲಿ, ಬಾಬರ್ ದೈಹಿಕವಾಗಿ ಅಲ್ಲ, ಮಾನಸಿಕವಾಗಿ ಸಮಸ್ಯೆ ಎದುರಿಸುತ್ತಿದ್ದಾರೆ ಎಂದು ಅಭಿಪ್ರಾಯಪಟ್ಟಿದ್ದಾರೆ. ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ ಮಾತನಾಡಿದ ಅವರು, ಬಾಬರ್ ಈಗ ಮಾನಸಿಕವಾಗಿ ಅನರ್ಹರು ಎಂದು ಹೇಳಿದ್ದಾರೆ.

ಇನ್ನು 2026ರ ಟಿ20 ವಿಶ್ವಕಪ್‌ನಲ್ಲಿ ಬಾಬರ್ ಆರು ಇನ್ನಿಂಗ್ಸ್‌ಗಳಲ್ಲಿ ಕೇವಲ 91 ರನ್ ಮಾತ್ರ ಗಳಿಸಿದ್ದರು. ಇದಕ್ಕೂ ಮೊದಲು ನಡೆದ ಹಲವು ಐಸಿಸಿ ಟೂರ್ನಿಗಳಲ್ಲೂ ಅವರು ನಿರೀಕ್ಷಿತ ಪ್ರದರ್ಶನ ನೀಡದಿದ್ದರಿಂದ ಪಾಕಿಸ್ತಾನ ತಂಡವೂ ಸೆಮಿಫೈನಲ್ ಪ್ರವೇಶಿಸಲು ವಿಫಲವಾಗಿತ್ತು ಎಂದು ಹೇಳಿದ್ದಾರೆ.

Must Read

error: Copy ಬೇಡ, Coffee ಜೊತೆ ಹಂಚಿಕೊಳ್ಳಿ !